ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ; ಬಿಬಿಎಂಪಿ ಅಧಿಕಾರಿ, ಸಿಬ್ಬಂದಿಗೆ ಮಹತ್ವದ ಸೂಚನೆ

|
Google Oneindia Kannada News

ಬೆಂಗಳೂರು, ಮಾರ್ಚ್ 13: ರಾಜ್ಯದ ಕೆಲವು ಭಾಗಗಳಲ್ಲಿ ಕೊರೋನ ವೈರಾಣು(ಕೋವಿಡ್-19) ಹರಡುತ್ತಿದ್ದು, ಅದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯಲ್ಲಿ ಅನೇಕ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮಾರ್ಚ್ 14 ಹಾಗೂ 15 ರಂದು ಹಾಗೂ ಕರೋನ ವೈರಾಣು(ಕೋವಿಡ್-19) ನಿಯಂತ್ರಣಕ್ಕೆ ಬರುವವರೆಗೆ ಮುಂಬರುವ ಎಲ್ಲಾ ಸಾರ್ವತ್ರಿಕ ರಜಾ ದಿನಗಳಂದು, ಬಿಬಿಎಂಪಿಯ ಎಲ್ಲಾ ರೆಫರಲ್/ ಹೆರಿಗೆ ಆಸ್ಪತ್ರೆಗಳು, ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರುಗಳು, ಕಛೇರಿಯ ಸಿಬ್ಬಂದಿಗಳು, ಅರೆ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಎಲ್ಲಾ ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಂತೆ ಬಿಬಿಎಂಪಿ ಆಯುಕ್ತರು ಸೂಚಿಸಿದ್ದಾರೆ.

oronavirus; BBMP Health Wing Isuued The Notice To Employees

ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಸುಧಾರಿಸುವವರೆಗೂ ಆಸ್ಪತ್ರೆಯ ಕಛೇರಿ ಮುಖ್ಯಸ್ಥರು ಎಲ್ಲಾ ವೈದ್ಯರು ಅಧಿಕಾರಿ/ ಸಿಬ್ಬಂದಿಯವರಿಗೆ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡದಂತೆ ಸೂಚಿಸಿದೆ.

ಕೊರೊನಾ ಕಂಟಕ: ಬೆಂಗಳೂರಿನ ಮಾಲ್, ಥಿಯೇಟರ್ ಗಳು ಖಾಲಿ ಖಾಲಿಕೊರೊನಾ ಕಂಟಕ: ಬೆಂಗಳೂರಿನ ಮಾಲ್, ಥಿಯೇಟರ್ ಗಳು ಖಾಲಿ ಖಾಲಿ

ಈಗಾಗಲೇ ರಜೆಯ ಮೇಲೆ ತೆರಳಿರುವವರನ್ನು ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ವಿಶೆಷ ಆಯುಕ್ತರುರವರು ಸುತ್ತೋಲೆ ಹೊರಡಿಸಿದ್ದಾರೆ.

English summary
Coronavirus; BBMP Health Wing Isuued The Notice To Employees. No leaves for march 14th and 15th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X