ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಮಾರ್ಚ್ 22: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ರಾಜ್ಯ ಸರ್ಕಾರ ಕೆಲವು ತುರ್ತು ನಿರ್ಧಾರಗಳನ್ನು ತೆಗೆದುಕೊಂಡಿದೆ.

ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರಗಳನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ‌ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದು ಮಾಡಲಾಗಿದೆ. ಎಸಿ ಬಸ್ ಸೇವೆ 31 ರವರೆಗೆ ಇಲ್ಲರುವುದಿಲ್ಲ. ಇಂದು ರಾತ್ರಿ 9 ರಿಂದ 11 ರವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ.

Coronavirus Janta Curfew Live Updates: ಭಾರತದೆಲ್ಲೆಡೆ ಜನತಾ ಕರ್ಫ್ಯೂಗೆ ವ್ಯಾಪಕ ಬೆಂಬಲCoronavirus Janta Curfew Live Updates: ಭಾರತದೆಲ್ಲೆಡೆ ಜನತಾ ಕರ್ಫ್ಯೂಗೆ ವ್ಯಾಪಕ ಬೆಂಬಲ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ಮಂಗಳೂರು ಜಿಲ್ಲೆಗಳಲ್ಲಿ ಮಾರ್ಚ್ 31 ವರೆಗೆ ಲಾಕ್ ಡೌನ್ ಮುಂದುವರಿಕೆ ಆಗಲಿದೆ. ಈ 9 ಜಿಲ್ಲೆಗಳಲ್ಲಿ ಸಾರಿಗೆ ಸೇರಿದಂತೆ ಯಾವುದೇ ವ್ಯವಸ್ಥೆ ಇರುವುದಿಲ್ಲ.

ಬ್ರೇಕಿಂಗ್: ಕರ್ನಾಟಕದ 9 ಜಿಲ್ಲೆಗಳು ಸೇರಿ ಭಾರತದ 75 ಜಿಲ್ಲೆಗಳ ಲಾಕ್!ಬ್ರೇಕಿಂಗ್: ಕರ್ನಾಟಕದ 9 ಜಿಲ್ಲೆಗಳು ಸೇರಿ ಭಾರತದ 75 ಜಿಲ್ಲೆಗಳ ಲಾಕ್!

ಆದರೆ, ಈ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ ನಾಳೆ ನಡೆಯಲಿದೆ.‌ ನಾಳೆ ವಿಧಾನಮಂಡಲದ ಅಧಿವೇಷನ ಮುಂದುವರೆಯಲಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಸೆಕ್ಷನ್ 144 ಜಾರಿ

ಸೆಕ್ಷನ್ 144 ಜಾರಿ

1. ಪ್ರಸಕ್ತ ವಿದ್ಯಮಾನಗಳನ್ನು ಪರಿಶೀಲಿಸಿ ಕೆಲವು ಮಹತ್ವ ಪೂರ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ನಾಳೆ ಕೂಡ ಸಾರ್ವಜನಿಕ ಸಾರಿಗೆ ಸೇವೆಯನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ. ಎಲ್ಲಾ ಎ.ಸಿ. ಬಸ್ಸುಗಳ ಸಂಚಾರವನ್ನು 31ನೇ ಮಾರ್ಚ್ 2020 ರವರೆಗೆ ಸ್ಥಗಿತಗೊಳಿಸಲಾಗುವುದು.

2. ಇಂದು ದಿನ ರಾತ್ರಿ 9 ಗಂಟೆಗೆ ಜನತಾ ಕರ್ಪೂ ಮುಗಿಯಲಿದ್ದು, ಆದರೆ 9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿದೆ.

9 ಜಿಲ್ಲೆಗಳು ಲಾಕ್ ಡೌನ್

9 ಜಿಲ್ಲೆಗಳು ಲಾಕ್ ಡೌನ್

3. ನಾಳೆಯಿಂದ 31ನೇ ತಾರೀಖಿನವರೆಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಬೆಳಗಾವಿ ಸೇರಿದಂತೆ ಕೋವಿಡ್-19 ಪ್ರಕರಣ ಕಂಡುಬಂದಿರುವ ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿರ್ಭಂದಿಸಲಾಗುವುದು.

ಮಾರ್ಚ್ 31ರ ತನಕ ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಇಲ್ಲಮಾರ್ಚ್ 31ರ ತನಕ ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಇಲ್ಲ

ಅಂತರ್ ಜಿಲ್ಲೆಯ ಸಾರಿಗೆ ವ್ಯವಸ್ಥೆ ಸ್ಥಗಿತ

ಅಂತರ್ ಜಿಲ್ಲೆಯ ಸಾರಿಗೆ ವ್ಯವಸ್ಥೆ ಸ್ಥಗಿತ

4.ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಕೆಗಳಲ್ಲಿ, ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸುವುದು.

5.ಈ 9 ಜಿಲ್ಲೆಗಳಲ್ಲಿ ಅಂತರ್ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು 31ನೇ ಮಾರ್ಚ್ 2020ರವರೆಗೆ ಸ್ಥಗಿತಗೊಳಿಸಲಾಗುವುದು.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ

6.ಕೊರೊನಾ ಸೋಂಕು ಹರಡಿರುವ ಕರ್ನಾಟಕದ 9 ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ, ಆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತದೆ. ಕೊರೊನಾ ಭೀತಿ ನಡುವೆಯೇ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆ ನಡೆಯಲಿದೆ.‌ ನಾಳೆ ವಿಧಾನಮಂಡಲದ ಅಧಿವೇಶನ ಸಹ ಮುಂದುವರೆಯಲಿದೆ.

English summary
Coronavirus in karnataka: Home minister Basavaraj Bommai spoke about emergency decisions taken by the state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X