ಏಪ್ರೀಲ್ 14 ರವರೆಗೂ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ
ಬೆಂಗಳೂರು, ಮಾರ್ಚ್ 22: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಪ್ಯೂ ಗೆ ಕರೆ ನೀಡಿದ್ದಾರೆ.
ಇದಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಕೂಡ ಏಪ್ರೀಲ್ 14 ರವೆರೆಗೆ ಮಟ್ರೋ ಓಡಿಸದಿರಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಎಂಆರ್‌ಸಿಎಲ್, ಕೋವಿಡ್ 19 ಹರಡುವುದನ್ನು ತಡೆಗಟ್ಟುವ ಸಲುವಾಗಿ, ಏಪ್ರೀಲ್ 14 ರವೆರೆಗೆ ಮೆಟ್ರೋ ಸಂಚಾರ ಇರುವುದಿಲ್ಲ. ಜನ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದೆ.
ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಸರ್ಕಾರ ಸೂಚಿಸಿದ ನಿಯಮಗಳನ್ನು ಅನುಸರಿಸಿ ಎಂದು ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಕ್ಕೆ ಏರಿದ್ದು ಮಾರಕ ರೋಗಕ್ಕೆ ಇದುವರೆಗೆ ರಾಜ್ಯದಲ್ಲಿ 2 ಜನ ಮೃತಪಟ್ಟಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಚ್ 23 ರಂದೇ ಬಿಎಂಆರ್‌ಸಿಎಲ್ ಮೆಟ್ರೋ ಸಂಚಾರವನ್ನು ಸಂಪೂರ್ಣ ರದ್ದು ಮಾಡಿತ್ತು.












Click it and Unblock the Notifications