ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ನಿಯಂತ್ರಿಸಲು ಕರ್ನಾಟಕ 200 ಕೋಟಿ ಕೊಟ್ಟರೆ, ಕೇರಳ 2000 ಕೋಟಿ: ಕುಮಾರಣ್ಣ ಏನಂದ್ರು?

|
Google Oneindia Kannada News

ಬೆಂಗಳೂರು, ಮಾರ್ಚ್ 20: ಕರ್ನಾಟಕದಲ್ಲಿ ಕೊರೊನಾ ಆತಂಕ ಕಮ್ಮಿಯಾಗಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಶಂಕಿತರು ಅಧಿಕವಾಗುತ್ತಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಮಾರ್ಚ್ 31ರವರೆಗೂ ಮಾಲ್, ಚಿತ್ರಮಂದಿರ, ಪಬ್, ಕ್ಲಬ್, ಸಭೆ, ಸಮಾರಂಭ, ಪಾರ್ಟಿ ಎಲ್ಲದಕ್ಕೂ ನಿರ್ಬಂಧ ಹೇರಿದೆ.

ಕೊರೊನಾ ದಾಳಿ ದೇಶದ ಆರ್ಥಿಕತೆ ಮೇಲೆ ಭಾರಿ ಪರಿಣಾಮ ಬೀರಿದ್ದು, ಉದ್ಯಮ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಿಯಂತ್ರಣಕ್ಕೆ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ 200 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆ ಕಡೆ ಕೊರೊನಾದಿಂದ ಸಂಕಷ್ಟದಲ್ಲಿರುವ ಕೇರಳ ಸರ್ಕಾರವೂ ಕೇರಳ ಜನರಿಗೆ ನೆರವಾಗುವ ದೃಷ್ಟಿಯಿಂದ 2000 ಕೋಟಿ ಬಿಡುಗಡೆ ಮಾಡಿದೆ.

ನಿಲ್ಲದ ಜಗತ್ತಿನ ತಲ್ಲಣ: 10 ಸಾವಿರ ದಾಟಿದ ಕೊರೊನಾ ಸಾವಿನ ಪ್ರಮಾಣನಿಲ್ಲದ ಜಗತ್ತಿನ ತಲ್ಲಣ: 10 ಸಾವಿರ ದಾಟಿದ ಕೊರೊನಾ ಸಾವಿನ ಪ್ರಮಾಣ

ಕರ್ನಾಟಕ ಹಾಗೂ ಕೇರಳ ಎರಡೂ ರಾಜ್ಯಗಳಲ್ಲೂ ಬಹುತೇಕ ಒಂದೇ ರೀತಿ ಸ್ಥಿತಿ ನಿರ್ಮಾಣವಾಗಿದೆ. ಆದರೂ ಅನುದಾನದಲ್ಲಿ ಭಾರಿ ವ್ಯತ್ಯಾಸವಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಮುಂದೆ ಓದಿ....

ಕೇರಳ ನಮಗೆ ಮಾದರಿಯಾಗಬಾರದೇಕೆ?

''#coronavirus ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ ₹20,000 ಕೋಟಿ ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, MGNREGSಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ?'' ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕೇರಳಕ್ಕಿಂತ ನಮ್ಮಲ್ಲಿ ಭಿನ್ನವೇನಲ್ಲ

''ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ. ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ. ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು'' ಎಂದು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ 3 ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಮಹಾರಾಷ್ಟ್ರದಲ್ಲಿ ಮತ್ತೆ 3 ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆ

ಕುಮಾರಸ್ವಾಮಿ ಸಲಹೆ

''ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು'' ಎಂದು ಸಲಹೆ ನೀಡಿದ್ದಾರೆ.

ಬಡವರ ಪರ ಸರ್ಕಾರ ನಿಲ್ಲಬೇಕಾಗಿದೆ

''ಕೊರೊನಾ ವೈರಸ್ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು'' ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.

English summary
Ex Chief minister HD Kumaraswamy unhappy about karnataka govt, because BSY released just 200 crores to Control corona. but, kerala govt has released 2000 crore to corona precautions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X