ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಸಂಖ್ಯೆ 5ಕ್ಕೆ ಏರಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್.12: ಸಿಲಿಕಾನ್ ಸಿಟಿಯಲ್ಲಿ ಮಾರಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಗ್ರೀಸ್ ನಿಂದ ಬೆಂಗಳೂರಿಗೆ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಸೋಂಕಿತ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಶಂಕಿತ ವ್ಯಕ್ತಿಯನ್ನು ಆಸ್ಪತ್ರೆಯ ಐಸೋಲೆಟೆಡ್ ಕೇಂದ್ರದಲ್ಲಿ ಇರಿಸಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಈ ವ್ಯಕ್ತಿಯ ಜೊತೆಗೆ ಆಗಮಿಸಿದ ವ್ಯಕ್ತಿಗಳನ್ನು ಪತ್ತೆ ಮಾಡಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಆಂಧ್ರಪ್ರದೇಶದಲ್ಲಿ ಮೊದಲ ಕೊರೊನಾ ಕೇಸ್‌ ದೃಢ: ಆರೋಗ್ಯ ಇಲಾಖೆಆಂಧ್ರಪ್ರದೇಶದಲ್ಲಿ ಮೊದಲ ಕೊರೊನಾ ಕೇಸ್‌ ದೃಢ: ಆರೋಗ್ಯ ಇಲಾಖೆ

ಇನ್ನು, ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 5ಕ್ಕೆ ಏರಿಕೆಯಾಗಿರುವ ಬಗ್ಗೆ ಸ್ವತಃ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಕಳೆದ ಮಾರ್ಚ್.06ರಂದು ಸೋಂಕಿತ ವ್ಯಕ್ತಿಯು ಗ್ರೀಸ್ ನಿಂದ ಬೆಂಗಳೂರಿಗೆ ಆಗಮಿಸಿದ್ದನು ಎಂದು ತಿಳಿದು ಬಂದಿದೆ.

Coronavirus: Infected Case Rised 5 In Bangalore

ಬೆಂಗಳೂರಿಗೆ ಬಂದ ವ್ಯಕ್ತಿಯ ದಿನಚರಿ ಹೇಗಿತ್ತು:

ಮೊದಲು ಬೆಂಗಳೂರಿಗೆ ಆಗಮಿಸಿದ್ದ 26 ವರ್ಷದ ವ್ಯಕ್ತಿಯು ಅಂದು ಕೇವಲ 4 ಜನ ಆತ್ಮೀಯ ಸ್ನೇಹಿತರನ್ನು ಮಾತನಾಡಿಸಿ ಮನೆಗೆ ವಾಪಸ್ ಆಗಿದ್ದಾನೆ. ಆತ ಕಾರ್ಯ ನಿರ್ವಹಿಸುತ್ತಿದ್ದ ಕಚೇರಿಯಲ್ಲಿ 154 ಉದ್ಯೋಗಿಗಳಿದ್ದಾರೆ. ಆದರೆ ಈತ ಯಾರ ಸಂಪರ್ಕಕ್ಕೂ ಸಿಗದೇ ಕೆಲವೇ ಗಂಟೆಯಲ್ಲಿ ವಾಪಸ್ ಬಂದಿದ್ದಾನೆ. ಅದೇ ದಿನ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಸೋದರ ಮಾತ್ರ ಬೆಂಗಳೂರಲ್ಲಿದ್ದು, ಜೊತೆಗೆ ವಾಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಈತನ ಪತ್ನಿ, ತಂದೆ, ತಾಯಿ ಎಲ್ಲರೂ ಮುಂಬೈನಲ್ಲಿ ವಾಸವಿದ್ದಾರೆ ಎನ್ನಲಾಗಿದೆ.

ಇನ್ನು, ಬೆಂಗಳೂರಿಗೆ ಬಂದಾಗ ಆಟೋ ಡ್ರೈವರ್ ಭೇಟಿ ಮಾಡಿ ಪ್ರಯಾಣ ಮಾಡುತ್ತಿದ್ದನು. ಆ ಆಟೋ ಡ್ರೈವರ್ ಮನೆಯಲ್ಲಿ ಮೂವರು ಸದಸ್ಯರಿದ್ದಾರೆ. ಹೀಗಾಗಿ ಎಲ್ಲ ರೀತಿಯ ಮಾಹಿತಿ ಕಲೆ ಹಾಕಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

English summary
Coronavirus: Another One Person Get Positive Result. Infected Case Rised 5 In Bangalore. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X