ಬೆಂಗಳೂರು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಓಡಾಟ: ಸಿಬ್ಬಂದಿಗೆ ಆತಂಕ
ಬೆಂಗಳೂರು, ಮಾರ್ಚ್ 19: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆಯ ಓಡಾಟ ಆಸ್ಪತ್ರೆಯಲ್ಲಿರುವ ಸಬ್ಬಂದಿ ಹಾಗೂ ರೋಗಿಗಳನ್ನು ಆತಂಕಕ್ಕೀಡು ಮಾಡಿದೆ.
Recommended Video
ಲಂಡನ್‌ನಿಂದ ಮಾರ್ಚ್ 14ರಂದು ನಗರಕ್ಕೆಆಗಮಿಸಿರುವ 20 ವರ್ಷದ ಯುವತಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಈ ಸೋಂಕಿತ ವ್ಯಕ್ತಿಯು ವಿಕ್ಟೋರಿಯಾ ಆಸ್ಪತ್ರೆಯ ಆವರಣದ ನೆಫ್ರೋಯುರಾಲಜಿ ಸಂಸ್ಥೆಗೆ ಭೇಟಿ ನೀಡಿರುವ ಮಾಹಿತಿ ಬಹಿರಂಗಗೊಂಡಿದ್ದು ಆಸ್ಪತ್ರೆ ಸಿಬ್ಬಂದಿ ಆತಂಕದಲ್ಲಿದ್ದಾರೆ.
ಯುವತಿಯು ಆಸ್ಪತ್ರೆಯ ನೆಫ್ರೋಯುರೋಲಜಿ ಮುಖ್ಯಸ್ಥರನ್ನು ಭೇಟಿಯಾಗಿದ್ದು ಅವರ ಸಂಬಂಧಿ ಎಂದು ತಿಳಿದುಬಂದಿದೆ. ಮಾರ್ಚ್ 14 ರಂದು ನಗರಕ್ಕೆ ಬಂದಿರುವ ಅವರನ್ನು 14 ದಿನ ಮನೆಯಲ್ಲೇ ಇರುವಂತೆ ಸೂಚಿಸಲಾಗಿತ್ತು. ಆದರೂ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಬಳಿಕ ವೈದ್ಯರು ಅವರನ್ನು ಡಯಾಲಿಸಿಸ್ ವಿಭಾಗ ಸೇರಿದಂತೆ ಎಲ್ಲಾ ವಿಭಾಗಕ್ಕೂ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸೋಂಕಿತ ಯುವತಿ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ನೆಫ್ರೋಯುರಾಲಜಿ ವೈದ್ಯರು ಇಬ್ಬರು ವೈಸ್ಯರೊಂದಿಗೆ ಸಭೆ ನಡೆಸಿದ್ದರು. ನಂತರ ಆಸ್ಪತ್ರೆಯ ಇತರೆ ವೈದ್ಯರು ಹಾಗೂ ಸಿಬ್ಬಂದಿ ಮತ್ತು ಕೆಲ ರೋಗಿಗಳು ಸೇರಿದಂತೆ ಅನೇಕ ಜನರ ಸಂಪರ್ಕ ಮಾಡಿದ್ದಾರೆ.
ಯುವತಿಗೆ ಸೋಂಕು ಇರುವುದು ದೃಢಪಟ್ಟಿರುವ ಮಾಹಿತಿ ಹೊರಬೀಳುತ್ತಿದ್ದಂತೆ ಮೂವರು ವೈದ್ಯರು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ದೊರೆತಿದೆ. ಹೀಗಾಗಿ ಆಸ್ಪತ್ರೆಯಲ್ಲಿರುವ ಸಿಬ್ಬಂದಿ ಹಾಗೂ ರೋಗಿಗಳೆಲ್ಲರನ್ನೂ ಪರೀಕ್ಷೆಗೊಳಪಡಿಸಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.












Click it and Unblock the Notifications