ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ 4.0: ಶಿಕ್ಷಣ ಇಲಾಖೆಯ ಮುಂದಿದೆ ಬಹುದೊಡ್ಡ ಸವಾಲುಗಳು

|
Google Oneindia Kannada News

ಬೆಂಗಳೂರು, ಮೇ 18: ಮಾರಣಾಂತಿಕ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಲಾಕ್ ಡೌನ್ ಘೋಷಿಸಲಾಗಿದೆ. ಮೇ 31 ರವರೆಗೂ ಲಾಕ್ ಡೌನ್ ಮುಂದುವರೆಯಲಿದ್ದು, ಶಿಕ್ಷಣ ಇಲಾಖೆಗೆ ಬಹುದೊಡ್ಡ ಸವಾಲುಗಳು ಎದುರಾಗಿದೆ.

ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಬಾಕಿ ಉಳಿದಿದೆ. ಸುಮಾರು ಆರುವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಹಾಸ್ಟೆಲ್ ಗಳಲ್ಲಿದ್ದ ಹಲವು ವಿದ್ಯಾರ್ಥಿಗಳು ಈಗಾಗಲೇ ತಮ್ಮ ತಮ್ಮ ಊರು ಸೇರಿರುವುದರಿಂದ, ತಮ್ಮ ತಮ್ಮ ಊರುಗಳಿಂದಲೇ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅನುವು ಮಾಡಿಕೊಟ್ಟಿದೆ.

ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಇನ್ನೂ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಜವಾಬ್ದಾರಿ ಕೂಡ ಶಿಕ್ಷಣ ಇಲಾಖೆಯ ಹೆಗಲ ಮೇಲಿದೆ. ಈ ಬಾರಿ ಸುಮಾರು ಎಂಟುವರೆ ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ.

Coronavirus Lockdown: Challenges That Karnataka Education Department Is Facing

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಪರೀಕ್ಷೆ ನಡೆಸಬೇಕಾಗಿದ್ದು, ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡಬೇಕಿದೆ. ಪ್ರತಿ ಕೊಠಡಿಯಲ್ಲಿ ಕಡಿಮೆ ವಿದ್ಯಾರ್ಥಿಗಳು ಇರುವಂತೆ ನೋಡಿಕೊಂಡು, ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕಿದೆ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಸಿಬ್ಬಂದಿಗಳನ್ನು ಒದಗಿಸಬೇಕಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಸಭೆ ಬಳಿಕ ಸುರೇಶ್ ಕುಮಾರ್ ಮಾಹಿತಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಸಭೆ ಬಳಿಕ ಸುರೇಶ್ ಕುಮಾರ್ ಮಾಹಿತಿ

ಇತ್ತ ಇತರೆ ತರಗತಿಗಳ ಶೈಕ್ಷಣಿಕ ಪಠ್ಯಕ್ರಮ ಆರಂಭದ ಕುರಿತು ಶಿಕ್ಷಣ ಇಲಾಖೆ ನಿರ್ಧಾರ ತೆಗೆದುಕೊಳ್ಳಬೇಕಿದೆ. ವಿದ್ಯಾರ್ಥಿಗಳ ಕಲಿಯುವಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕಿದೆ. ಈ ಎಲ್ಲಾ ಸವಾಲುಗಳನ್ನು ಶಿಕ್ಷಣ ಇಲಾಖೆ ಸಮರ್ಥವಾಗಿ ಎದುರಿಸಬೇಕಿದೆ.

English summary
Coronavirus Lockdown: Challenges that Karnataka Education Department is facing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X