ಕೊರೋನಾ ಭೀತಿ: 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ನೋ ಡ್ಯೂಟಿ !
ಬೆಂಗಳೂರು, ಏಪ್ರಿಲ್ 22 : ಪೊಲೀಸ್ ಇಲಾಖೆಯಲ್ಲಿ ಮಾತ್ರವಲ್ಲ, ಕರ್ನಾಟಕ ರಾಜ್ಯ ಮೀಸಲು ಪಡೆಯ ಸಿಬ್ಬಂದಿಗೂ ಕೊರೋನಾ ಕಾಣಿಸಿಕೊಂಡಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ 20 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಐವತ್ತೈದು ವರ್ಷ ವಯಸ್ಸಿನ ಕೆಎಸ್ಆರ್ಪಿ ಸಿಬ್ಬಂದಿಯನ್ನು ಹೊರಗಡೆ ಕೆಲಸಕ್ಕೆ ನಿಯೋಜನೆ ಮಾಡದಂತೆ ಕೆಎಸ್ಆರ್ಪಿ ಮುಖ್ಯಸ್ಥ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿರುವ ಕೆಎಸ್ಆರ್ಪಿ ಸಿಬ್ಬಂದಿಯ ಪೈಕಿ ಅಧಿಕೃತವಾಗಿ ಇಪ್ಪತ್ತು ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಮನೆಯಲ್ಲಿ ಕ್ವಾರೆಂಟೈನ್ನಲ್ಲಿದ್ದರೆ, ಇನ್ನು ಕೇರಳ ಚುನಾವಣೆ ಕರ್ತವ್ಯಗೆ ತೆರಳಿದ್ದ ಅಸಿಸ್ಟೆಂಟ್ ಕಮಾಂಡೆಂಟ್ ಸೇರಿ ಎಂಟು ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ಹೊರಗಡೆ ಕೆಲಸಕ್ಕೆ ನಿಯೋಜನೆ ಮಾಡದಂತೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.

Recommended Video
ಹಿರಿಯ ಕೆಎಸ್ಆರ್ಪಿ ಸಿಬ್ಬಂದಿ ಕಚೇರಿ ಕ್ಯಾಂಪಸ್ ನಲ್ಲಿಯೇ ಕೆಲಸ ಮಾಡಲು ಸೂಚಿಸಲಾಗಿದೆ. ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಕೊರೋನಾ ಕಾಣಿಸಿಕೊಂಡಿತ್ತು. ಆನಂತರ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸೇರಿದಂತೆ ಪೊಲೀಸರಲ್ಲಿ ಹೆಚ್ಚಾಗಿ ಕೊರೋನಾ ಕಾಣಿಸಿಕೊಂಡಿತ್ತು. ಹೀಗಾಗಿ ಎಲ್ಲಾ ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡುವ ಬಗ್ಗೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು. ಇದೀಗ ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿಯಲ್ಲಿ ಕೊರೋನಾ ಕಾಣಿಸಿಕೊಡಿರುವುದು ಅಧಿಕಾರಿಗಳಲ್ಲಿ ಕೂಡ ಆತಂಕ ಮೂಡಿಸಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications