ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೋನಾ ಭೀತಿ: 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ನೋ ಡ್ಯೂಟಿ !

|
Google Oneindia Kannada News

ಬೆಂಗಳೂರು, ಏಪ್ರಿಲ್ 22 : ಪೊಲೀಸ್ ಇಲಾಖೆಯಲ್ಲಿ ಮಾತ್ರವಲ್ಲ, ಕರ್ನಾಟಕ ರಾಜ್ಯ ಮೀಸಲು ಪಡೆಯ ಸಿಬ್ಬಂದಿಗೂ ಕೊರೋನಾ ಕಾಣಿಸಿಕೊಂಡಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ 20 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಐವತ್ತೈದು ವರ್ಷ ವಯಸ್ಸಿನ ಕೆಎಸ್‌ಆರ್‌ಪಿ ಸಿಬ್ಬಂದಿಯನ್ನು ಹೊರಗಡೆ ಕೆಲಸಕ್ಕೆ ನಿಯೋಜನೆ ಮಾಡದಂತೆ ಕೆಎಸ್‌ಆರ್‌ಪಿ ಮುಖ್ಯಸ್ಥ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಕೆಎಸ್‌ಆರ್‌ಪಿ ಸಿಬ್ಬಂದಿಯ ಪೈಕಿ ಅಧಿಕೃತವಾಗಿ ಇಪ್ಪತ್ತು ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಮನೆಯಲ್ಲಿ ಕ್ವಾರೆಂಟೈನ್‌ನಲ್ಲಿದ್ದರೆ, ಇನ್ನು ಕೇರಳ ಚುನಾವಣೆ ಕರ್ತವ್ಯಗೆ ತೆರಳಿದ್ದ ಅಸಿಸ್ಟೆಂಟ್ ಕಮಾಂಡೆಂಟ್ ಸೇರಿ ಎಂಟು ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ಹೊರಗಡೆ ಕೆಲಸಕ್ಕೆ ನಿಯೋಜನೆ ಮಾಡದಂತೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.

CoronaVirus : No duty for 55 year old police personnel

Recommended Video

Lockdown ವಿಚಾರವಾಗಿ ಸ್ಪಷ್ಟನೆ ನೀಡಿದ Dr. Sudhakar | Oneindia Kannada

ಹಿರಿಯ ಕೆಎಸ್‌ಆರ್‌ಪಿ ಸಿಬ್ಬಂದಿ ಕಚೇರಿ ಕ್ಯಾಂಪಸ್ ನಲ್ಲಿಯೇ ಕೆಲಸ ಮಾಡಲು ಸೂಚಿಸಲಾಗಿದೆ. ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಕೊರೋನಾ ಕಾಣಿಸಿಕೊಂಡಿತ್ತು. ಆನಂತರ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸೇರಿದಂತೆ ಪೊಲೀಸರಲ್ಲಿ ಹೆಚ್ಚಾಗಿ ಕೊರೋನಾ ಕಾಣಿಸಿಕೊಂಡಿತ್ತು. ಹೀಗಾಗಿ ಎಲ್ಲಾ ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡುವ ಬಗ್ಗೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು. ಇದೀಗ ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿಯಲ್ಲಿ ಕೊರೋನಾ ಕಾಣಿಸಿಕೊಡಿರುವುದು ಅಧಿಕಾರಿಗಳಲ್ಲಿ ಕೂಡ ಆತಂಕ ಮೂಡಿಸಿದೆ.

English summary
Corona virus infected with 20 police personnel from Karnataka State Reserve police know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X