ವಿಜ್ಞಾನಿಯಿಂದ ವಿಡಿಯೋ: ವೈರಸ್ ಭಯ ಬಿಡಿ, ಎಚ್ಚರಿಕೆಯಿಂದಿರಿ

ಬೆಂಗಳೂರು, ಮಾರ್ಚ್ 16: ಚೀನಾದಿಂದ ವಿಶ್ವವ್ಯಾಪಿಯಾಗಿ ಹರಡಿರುವ ಕೊರೊನಾವೈರಸ್ ಎಲ್ಲೆಡೆ ಆತಂಕ ಸೃಷ್ಟಿಸಿದೆ. ಎಲ್ಲಿ ನೋಡಿದರೂ ಕೊರೊನಾ ಬಗ್ಗೆ ಚರ್ಚೆ. ಹಾಗಿದ್ದರೆ ಏನಿದು ಕೊರೊನಾ? ಚೀನಾದಲ್ಲಿ ಹೇಗೆ ಇದು ಕಾಣಿಸಿಕೊಂಡಿತು? ಇದು ಮನುಷ್ಯನ ಮೇಲೆ ಹೇಗೆ ಪರಿಣಾಮ ಬೀರುತ್ತೆ? ಇದಕ್ಕೆ ಮದ್ದೇನು? ಇದನ್ನು ತಡೆಯಲು ನಾವು ತೆಗೆದುಕೊಳ್ಳಬೇಕಾದ ಎಚ್ಚರಿಕೆಯೇನು? ಹೀಗೆ ಪ್ರಶ್ನೆಗಳು ಎದ್ದಿವೆ.

ಈ ಎಲ್ಲಾ ಪ್ರಶ್ನೆಗಳಿಗೆ ಕನ್ನಡದಲ್ಲೇ ತಿಳಿಸುವ ಕೆಲಸವನ್ನು ತಿಳಿ ಚಾನೆಲ್ ತಂಡ ಮಾಡುತ್ತಿದೆ. ಮೈಕ್ರೋಬಯಾಲಜಿಸ್ಟ್, ವಿಜ್ಞಾನಿ ಸುಷ್ಮಾ ಪ್ರಭಾಕರ್ ಈ ವಿಡಿಯೋದಲ್ಲಿ ಅಗತ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಎಚ್ಚರಿಕೆಯಿರಲಿ, ಭಯಬೇಡ ಎಂದಿದ್ದಾರೆ.

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಕೊರೊನಾ ವೈರಸ್ ಎನ್ನುವುದು ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುವ ಸೋಂಕಾಗಿದೆ. ಈಗ ಪ್ರಾಣಿಗಳಿಂದ ಮನುಷ್ಯನಿಗೂ ಈ ಸೋಂಕು ತಗುಲುತ್ತಿದೆ.

ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಮೊದಲು ಶೀತ ಕಾಣಿಸಿಕೊಳ್ಳುತ್ತದೆ ಕ್ರಮೇಣವಾಗಿ ತಲೆನೋವು ಕಾಣಿಸಿಕೊಂಡು ಇಡೀ ದೇಹವನ್ನು ಆವರಿಸುತ್ತದೆ.

ಸಾಮಾನ್ಯ ಶೀತಕ್ಕೆ ಕಾರಣವಾಗುವ ವೈರಸ್ ರೋಗಿಯ ದೇಹ ಹೊಕ್ಕಿದ ಒಂದು ವಾರದಲ್ಲೇ ತಾನೆ ತಾನಾಗಿ ನಾಶವಾಗುತ್ತದೆ. ಅಥವಾ ತೆಗೆದುಕೊಳ್ಳುವ ಚಿಕಿತ್ಸೆ, ಆಹಾರ ಕ್ರಮದ ಮೇಲೆ ಶೀತ ಯಾವಾಗ ಕಡಿಮೆಯಾಗುತ್ತದೆ ಎಂಬುದು ನಿರ್ಧಾರವಾಗಲಿದೆ. ಆದರೆ, ಸಾರ್ಸ್ ಮಾದರಿ ಕೊರೊನಾವೈರಸ್ ನಿಂದ ಹರಡುವ ಕೊವಿಡ್ 19 ರೋಗದ ವೈರಸ್ ತಾನಾಗೇ ಸಾಯುವುದಿಲ್ಲ.

Coronavirus outbreak: Dont panic, take precautions says Scientist Sushma

ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಮೊದಲು ಶೀತ ಕಾಣಿಸಿಕೊಳ್ಳುತ್ತದೆ ಕ್ರಮೇಣವಾಗಿ ತಲೆನೋವು ಕಾಣಿಸಿಕೊಂಡು ಇಡೀ ದೇಹವನ್ನು ಆವರಿಸುತ್ತದೆ. ಹೆಚ್ಚಿನ ಮಾಹಿತಿ ವಿಡಿಯೋ ನೋಡಿ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+