• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾರ್ಚ್ 14ರಿಂದ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಆದೇಶ

|

ಬೆಂಗಳೂರು, ಮಾರ್ಚ್ 13: ಕರ್ನಾಟಕದಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, ನಾಳೆಯಿಂದ ಮಾಲ್, ಸಿನಿಮಾ ಚಿತ್ರಂದಿರಗಳು, ಪಬ್, ಕ್ಲಬ್, ಮೇಳ, ಮದುವೆ ಸಮಾರಂಭಗಳನ್ನು ಬಂದ್ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರ ಆದೇಶ ನೀಡಿದೆ.

   Karnataka Government orders the closure of pubs, malls, cinema halls from tomorrow | Karnataka Band

   ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಒಂದು ವಾರಗಳವರೆಗೂ ರಾಜ್ಯ ಪೂರ್ತಿ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

   ಬೆಂಗಳೂರಿಗರಿಗೆ ಆಘಾತಕಾರಿ ಸುದ್ದಿ: ಗೂಗಲ್ RMZ ಕಂಪನಿಯಲ್ಲಿ ಕೊರೊನಾ!

   ಕೊರೊನಾ ವೈರಸ್‌ಗೆ ಸಂಬಂಧಪಟ್ಟಂತೆ ಸಿಎಂ ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಆರೋಗ್ಯ ಸಚಿವರು, ಅಧಿಕಾರಿಗಳು ಮತ್ತು ವೈದ್ಯರು ಜೊತೆ ತುರ್ತು ಸಭೆ ನಡೆಸಿದರು. ಕೊರೊನಾ ವೈರಸ್ ಹೆಚ್ಚು ಹರಡುತ್ತಿದ್ದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಒಂದು ವಾರಗಳ ಕಾಲ ಕರ್ನಾಟಕ ಬಂದ್ ಮಾಡಲು ಈ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ.

   ರಾಜ್ಯಾದ್ಯಂತ ಎಲ್ಲ ಮಾಲ್‌ಗಳು, ಸಿನಿಮಾ ಚಿತ್ರಮಂದಿರಗಳು, ಪಬ್, ಕ್ಲಬ್, ಮದುವೆ ಸಮಾರಂಭ, ಮೇಳ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳಿಗೂ ರಜೆ ನೀಡುವಂತೆ ಸೂಚಿಸಲಾಗಿದೆ. ಎಲ್ಲ ಮಾದರಿಯ ಕ್ರೀಡೆಗಳಿಗೂ ನಿರ್ಬಂಧ ಹೇರಲಾಗಿದೆ.

   ಕೊರೊನಾದಿಂದ ರಾಜ್ಯದಲ್ಲಿ ಮೊದಲ ಸಾವು: ತಲೆ ತಗ್ಗಿಸುವ ಸಂಗತಿ ಎಂದ ಬಿ.ಎಸ್.ವೈ

   ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ನಿಗದಿಯಾಗಿರುವಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಇನ್ನುಳಿದಂತೆ ಅಧಿವೇಶನ ಮುಂದುವರಿಯುತ್ತೆ, ಸರ್ಕಾರಿ ಕಚೇರಿಗಳಲ್ಲಿ ಎಂದಿನಂತೆ ಕೆಲಸ ನಡೆಯಲಿದೆ, ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

   English summary
   Karnataka Government orders the closure of pubs, malls, cinema halls from tomorrow for a week. Bans huge public events, big weddings, conferences etc.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X