ಮಾರ್ಚ್ 19ರಿಂದ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ?

ಬೆಂಗಳೂರು, ಮಾರ್ಚ್ 18: ಕರ್ನಾಟಕದಲ್ಲಿ ಕೊರೊನಾ ಭೀತಿ ಮತ್ತಷ್ಟು ಹೆಚ್ಚಾಗುತ್ತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಏರತ್ತಲೆ ಇದೆ. ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಒಂದು ವಾರದವರೆಗೂ ಕರ್ನಾಟಕದಲ್ಲಿ ಮಾಲ್, ಸಿನಿಮಾಮಂದಿರ, ಪಬ್, ಕ್ಲಬ್, ಸಭೆ, ಮದುವೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿತ್ತು. ಆದರೆ, ಹೆಚ್ಚಿನ ಸುರಕ್ಷಿತೆಗಾಗಿ ಮಾರ್ಚ್ 31ರವರೆಗೂ ಈ ಆದೇಶವನ್ನು ರಾಜ್ಯ ಸರ್ಕಾರ ಮುಂದೂಡಿದೆ ಎಂದು ಸಿಎಂ ತಿಳಿಸಿದ್ದಾರೆ.

 Karnataka Govt Have Decide To Ban International Flight

ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿಗೆ ಬರಲಿರುವ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲು ಚಿಂತಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು 'ಮುನ್ನೆಚ್ಚರಿಕೆ ಕ್ರಮವಾಗಿ, ನಾಳೆಯಿಂದ ಬೆಂಗಳೂರಿಗೆ ಯಾವುದೇ ಅಂತರಾಷ್ಟ್ರೀಯ ವಿಮಾನಗಳು ಬರದಂತೆ ನಿರ್ಬಂಧ ವಿಧಿಸಲು ಚಿಂತಿಸಲಾಗಿದೆ. ನಾಗರಿಕರು ಯಾವುದೇ ಭೀತಿಗೆ ಒಳಗಾಗದೆ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ವಿನಂತಿಸುತ್ತೇನೆ'' ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಭಾರತಕ್ಕೆ ಬರುವ ಕೆಲವು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸಲಾಗಿದೆ. ಈಗ ಸಿಲಿಕಾನ್ ಸಿಟಿಯಲ್ಲೂ ಇಂತಹ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ. ಇದುವರೆಗೂ ಕೊರೊನಾ ಪತ್ತೆಯಾಗಿರುವವರ ಪೈಕಿ ಹೆಚ್ಚಿನವರು ವಿದೇಶದಿಂದ ಬಂದವರೇ. ಹಾಗಾಗಿ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಅಗತ್ಯ.

ಕರ್ನಾಟಕದಲ್ಲಿ ಇಂದು ಮೂರು ಹೊಸ ಕೊರೊನಾ ಪ್ರಕರಣಗಳು ಬೆಳಕಿದೆ ಬಂದಿದೆ. ಒಬ್ಬರು 56 ವಯಸ್ಸು, USA ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದವರು. ಈಗ ಅಮೆರಿಕ ಪ್ರವಾಸದಿಂದ ಹಿಂತಿರುಗಿದ 35 ವರ್ಷದ ವ್ಯಕ್ತಿಯಲ್ಲಿ ಸೋಂಕು ಖಚಿತವಾಗಿದ್ದು, ಕರ್ನಾಟಕದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 14ಕ್ಕೇರಿದೆ. ಈ ಮೂವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+