ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಕೊರೊನಾ ಸೋಂಕು ಶಂಕಿತ ಮಹಿಳೆ ಸಾವು

|
Google Oneindia Kannada News

ಬೆಂಗಳೂರು, ಮಾರ್ಚ್ 25: ಕೊರೊನಾ ಸೋಂಕು ಶಂಕಿತ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

ಮೆಕ್ಕಾ ಪ್ರವಾಸ ಮುಗಿಸಿ ಗೌರಿಬಿದನೂರಿಗೆ ಆಗಮಿಸಿದ್ದ ಮಹಿಳೆಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ನಂತರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಶಂಕಿತ ಮಹಿಳೆಯೊಬ್ಬರು ಗೌರಿಬಿದನೂರು ನಗರದ ಮನೆಯಲ್ಲಿ ಮೃತಪಟ್ಟಿದ್ದಾರೆ.

Live Updates : ರಾಜ್ಯದಲ್ಲಿ 21 ಸಾವಿರ ಮಂದಿ ಗೃಹಬಂಧನದಲ್ಲಿದ್ದಾರೆLive Updates : ರಾಜ್ಯದಲ್ಲಿ 21 ಸಾವಿರ ಮಂದಿ ಗೃಹಬಂಧನದಲ್ಲಿದ್ದಾರೆ

ಮೂಲತಃ ಆಂಧ್ರದ ಹಿಂದೂಪುರ ಮೂಲದ 70 ವರ್ಷದ ಮಹಿಳೆ ಮೆಕ್ಕಾ ಪ್ರವಾಸ ಕೈಗೊಂಡು ಕಳೆದ 9 ದಿನಗಳಿಂದ ಮಗನ ಮನೆಯಲ್ಲೇ ಕ್ವಾರಂಟೈನ್‍ನಲ್ಲಿದ್ದರು. ಮಂಗಳವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ಆಗಮಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿತ್ತು.

Coronavirus Suspected Death In Bengaluru

ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.ಆಸ್ಪತ್ರೆಗೆ ದಾಖಲಾದ ನಂತರ ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಅವರ ರಕ್ತದ ಮಾದರಿ ಹಾಗೂ ಗಂಟಲು ದ್ರವ ಮಾದರಿ ಪರೀಕ್ಷೆಗೆ ಸ್ಯಾಂಪಲ್ ಗಳನ್ನ ಕಲೆಕ್ಟ್ ಮಾಡಿಕೊಂಡಿದ್ದು. ವರದಿ ನಂತರವಷ್ಟೇ ಕೊರೊನಾ ಸೋಂಕು ದೃಢಪಡಲಿದೆ.

ಮೆಕ್ಕಾ ಪ್ರವಾಸದಿಂದ ಮರಳಿ ಮಗನ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. 70 ವರ್ಷದ ಮಹಿಳೆಗೆ ರಕ್ತದೊತ್ತಡ ಇತ್ತು. ಅಷ್ಟೇ ಅಲ್ಲದೇ ಕಾಲಿಗೆ ಬೇರೆ ಗಾಯ ಮಾಡಿಕೊಂಡಿದ್ದರು. ಇದರ ಜೊತೆ ಹೃದಯದ ಸಮಸ್ಯೆ ಸಹ ಇತ್ತು. ಅವರು ಕೊರೊನಾದಿಂದಲೇ ಮೃತಪಟ್ಟಿದ್ದಾರಾ ಅಥವಾ ಇನ್ಯಾವುದೇ ಕಾರಣವಿದೆಯೇ ಎಂದು ವರದಿ ಬಂದಮೇಲಷ್ಟೇ ತಿಳಿಯಲಿದೆ.

English summary
A woman suspected of coronavirus has died in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X