ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಈ ವಾರ್ಡ್‌ಗಳಲ್ಲಿ ಶೇ.50ರಷ್ಟು ಜನರಿಗೆ ಲಸಿಕೆ ನೀಡಿಲ್ಲ!

|
Google Oneindia Kannada News

ಬೆಂಗಳೂರು, ಆಗಸ್ಟ್ 2: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ರಾಜ್ಯ ರಾಜಧಾನಿಯೇ ಹಿಂದೆ ಬಿದ್ದಿದೆ. ಸಿಲಿಕಾನ್ ಸಿಟಿ ಹಲವು ವಲಯಗಳಲ್ಲಿ 45 ವರ್ಷ ಮೇಲ್ಪಟ್ಟ ಶೇ.50ರಷ್ಟು ಜನರಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಿಲ್ಲ ಎನ್ನುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ.

Recommended Video

ಕೊರೋನ ಲಸಿಕೆ ವಿಚಾರದಲ್ಲಿ ಗೋಲ್ಮಾಲ್!! | Oneindia Kannada

'ಬೆಂಗಳೂರಿನ 15 ವಾರ್ಡ್ ಗಳಲ್ಲಿ 45 ವರ್ಷ ಮೇಲ್ಪಟ್ಟ ಶೇ.50ರಷ್ಟು ಜನರು ಕೊರೊನಾವೈರಸ್ ಸೋಂಕಿನ ಒಂದೇ ಒಂದು ಡೋಸ್ ಲಸಿಕೆಯನ್ನೂ ಹಾಕಿಸಿಕೊಂಡಿಲ್ಲ,' ಎನ್ನುವುದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಒಂದು ತಿಂಗಳ ಕಾಲ ನಡೆಸಿದ ಮನೆ ಮನೆ ಸಮೀಕ್ಷೆ ವೇಳೆ ಗೊತ್ತಾಗಿದೆ.

60 ವರ್ಷ ಮೇಲ್ಪಟ್ಟವರಲ್ಲಿ ಕೊವಿಶೀಲ್ಡ್ ಪರಿಣಾಮ ಎಷ್ಟು ವಾರ ಇರುತ್ತೆ!? 60 ವರ್ಷ ಮೇಲ್ಪಟ್ಟವರಲ್ಲಿ ಕೊವಿಶೀಲ್ಡ್ ಪರಿಣಾಮ ಎಷ್ಟು ವಾರ ಇರುತ್ತೆ!?

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ 45 ವರ್ಷ ಮೇಲ್ಪಟ್ಟ ಶೇ.40ರಷ್ಟು ಜನರಿಗೆ ಇನ್ನೂ ಒಂದು ಡೋಸ್ ಲಸಿಕೆಯನ್ನೂ ಹಾಕಿಲ್ಲ, ಪೂರ್ವ ವಲಯವನ್ನು ಶೇ. 39ರಷ್ಟು ಮಂದಿಗೆ ಲಸಿಕೆ ನೀಡುವುದು ಇನ್ನೂ ಬಾಕಿ ಉಳಿದಿದೆ ಎಂದು ಸಮೀಕ್ಷೆ ವರದಿಯಿಂದ ಗೊತ್ತಾಗಿದೆ.

ಬೆಂಗಳೂರಿನಲ್ಲಿ ವಲಯವಾರು ಲಸಿಕೆ ವಿತರಣೆ

ಬೆಂಗಳೂರಿನಲ್ಲಿ ವಲಯವಾರು ಲಸಿಕೆ ವಿತರಣೆ

ಅಚ್ಚರಿ ಎನ್ನುವಂತೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಆದರೆ ಕಾವಲ್ ಬೈರಸಂದ್ರ ವಾರ್ಡಿನಲ್ಲಿ ಕೇವಲ ಶೇ.8ರಷ್ಟು ಜನರಿಗೆ ಲಸಿಕೆ ನೀಡಿದ್ದು, ಇನ್ನೂ 92ರಷ್ಟು ಜನರಿಗೆ ಲಸಿಕೆ ನೀಡುವುದು ಬಾಕಿ ಉಳಿದಿದೆ. ವಲಯವಾರು ಶೇ.50ಕ್ಕಿಂತ ಹೆಚ್ಚು ಜನರಿಗೆ ಲಸಿಕೆ ನೀಡುವುದು ಬಾಕಿ ಉಳಿದಿರುವ ವಾರ್ಡ್ ಗಳ ಪಟ್ಟಿ ಇಲ್ಲಿದೆ ನೋಡಿ.

ಲಸಿಕೆ ಪಡೆಯದವರ ಶೇಕಡಾವಾರು ಪ್ರಮಾಣ (45 ವರ್ಷ ಮೇಲ್ಪಟ್ಟವರು)

ಕಾವಲ್ ಬೈರಸಂದ್ರ - ಶೇ.92
ಮೌನೇಶ್ವರ ನಗರ ಶೇ.85
ಕುಶಾಲ್ ನಗರ ಶೇ.82
ಸಗಯ್ ಪುರಂ ಶೇ.81
ಶಂಕರ ಮಠ ಶೇ.64
ಕಾಟನ್ ಪೇಟೆ ಶೇ.59
ಗಾಂಧಿ ನಗರ ಶೇ.57
ಕೆ ಜಿ ಹಳ್ಳಿ ಶೇ.55
ಶೇ.50ಕ್ಕಿಂತ ಹೆಚ್ಚು ಲಸಿಕೆ ವಿತರಿಸಿದ ವಾರ್ಡ್

ಶೇ.50ಕ್ಕಿಂತ ಹೆಚ್ಚು ಲಸಿಕೆ ವಿತರಿಸಿದ ವಾರ್ಡ್

ಬೆಂಗಳೂರಿನ ಕೆಲವು ವಾರ್ಡ್ ಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಸಮರ್ಥವಾಗಿ ನಿರ್ವಹಿಸಲಾಗಿದೆ. 45 ವರ್ಷ ಮೇಲ್ಪಟ್ಟ ಶೇ.50ಕ್ಕಿಂತ ಹೆಚ್ಚು ಪ್ರಮಾಣದ ಲಸಿಕೆಯನ್ನು ನೀಡಿದ ವಾರ್ಡ್ ಮತ್ತು ಶೇಕಡಾವಾರು ಪ್ರಮಾಣವನ್ನು ಪಟ್ಟಿಯಲ್ಲಿ ವಿವರಿಸಲಾಗಿದೆ.

ಲಸಿಕೆ ಪಡೆಯದವರ ಶೇಕಡಾವಾರು ಪ್ರಮಾಣ (45 ವರ್ಷ ಮೇಲ್ಪಟ್ಟವರು)

ಬೊಮ್ಮನಹಳ್ಳಿ ಶೇ.00
ಯಲಹಂಕ ಶೇ.10
ಆರ್ ಆರ್ ನಗರ ಶೇ.12
ದಾಸರಹಳ್ಳಿ ಶೇ.17
ಮಹಾದೇವಪುರ ಶೇ.17
ದಕ್ಷಿಣ ವಲಯ ಶೇ.17
ಪೂರ್ವ ವಲಯ 39
ಪಶ್ಚಿಮ ವಲಯ 40
ಲಸಿಕೆ ನೀಡದಿರುವುದಕ್ಕೆ ಕೊರೊನಾವೈರಸ್ ಸೋಂಕು ಕಾರಣ!

ಲಸಿಕೆ ನೀಡದಿರುವುದಕ್ಕೆ ಕೊರೊನಾವೈರಸ್ ಸೋಂಕು ಕಾರಣ!

"ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಿಗದಿತ ಗುರಿಗಿಂತ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ ತೀರಾ ಕಡಿಮೆಯಾಗಿದೆ. ಈ ಪ್ರದೇಶದಲ್ಲಿ ಜನರಿಗೆ ಕೊವಿಡ್-19 ಸೋಂಕು ಇನ್ನೂ ಇರುವುದರಿಂದ ಸೋಂಕಿತರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಾಗಿಲ್ಲ," ಎಂದು ಬಿಬಿಎಂಪಿ ವಿಶೇಷ ಆಯುಕ್ತ(ಆರೋಗ್ಯ ವಿಭಾಗ) ಡಿ ರಂದೀಪ್ ತಿಳಿಸಿದ್ದಾರೆ. ಅಲ್ಲದೇ ಕೆಲವು ಜನರು ತಾವು ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ಬಗ್ಗೆ ಮಾಹಿತಿ ನೀಡುವುದಕ್ಕೆ ನಿರಾಕರಿಸಿರುವುದರಿಂದ ಅಂಥವರನ್ನು ಲಸಿಕೆ ಪಡೆದುಕೊಂಡಿಲ್ಲ ಎಂದು ಪರಿಗಣಿಸಲಾಗಿದೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಲಸಿಕೆ ಶಿಬಿರ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಲಸಿಕೆ ಶಿಬಿರ

"ಸಿಲಿಕಾನ್ ಸಿಟಿಯ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ತಲುಪುವ ನಿಟ್ಟಿನಲ್ಲಿ ಮೈಕ್ರೋ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಕೊವಿಡ್-19 ಲಸಿಕೆ ಪಡೆದುಕೊಳ್ಳುವಂತೆ ಜನರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅತಿಕಡಿಮೆ ಲಸಿಕೆ ವಿತರಣೆಯಾದ ಪ್ರದೇಶಗಳನ್ನು ಗುರುತಿಸಿ ಅಂಥ ವಾರ್ಡಿನ ರಸ್ತೆಗಳಲ್ಲೇ ಮೈತ್ರಿ ಲಸಿಕೆ ಕೇಂದ್ರಗಳನ್ನು ತೆರೆಯುವುದಕ್ಕೆ ಚಿಂತಿಸಲಾಗುತ್ತಿದೆ," ಎಂದು ಬಿಬಿಎಂಪಿ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 409 ಜನರಿಗೆ ಕೊವಿಡ್-19

ಸಿಲಿಕಾನ್ ಸಿಟಿಯಲ್ಲಿ 409 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 409 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1227748ಕ್ಕೆ ಏರಿಕೆಯಾಗಿದೆ. 8 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15880ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8553 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಕೊವಿಡ್-19 ಲಸಿಕೆ ಪಡೆದವರು ಎಷ್ಟು ಮಂದಿ?

ರಾಜ್ಯದಲ್ಲಿ ಕೊವಿಡ್-19 ಲಸಿಕೆ ಪಡೆದವರು ಎಷ್ಟು ಮಂದಿ?

ರಾಜ್ಯದಲ್ಲಿ ಈವರೆಗೂ 7,58,730 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,44,953 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,25,076 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,45,976 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,20,07,927 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 51,59,195 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,40,68,139 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 65,71,876 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
Coronavirus Vaccine: In 15 Bengaluru wards, not even half of over 45-year-olds Vaccinated.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X