• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕ್ವಾರಂಟೈನ್ ಕೇಂದ್ರದಿಂದ ಇಮ್ರಾನ್ ಪಾಷಾ ವಿಡಿಯೋ ಸಂದೇಶ

|

ಬೆಂಗಳೂರು, ಮೇ 31 : ಪಾದರಾಯನಪುರದ ಬಿಬಿಎಂಪಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಕ್ವಾರಂಟೈನ್‌ನಲ್ಲಿದ್ದಾರೆ. ಕೋವಿಡ್ - 19 ತಗುಲಿರುವುದು ಖಚಿತವಾದ ಹಿನ್ನಲೆಯಲ್ಲಿ ಶನಿವಾರ ಅವರನ್ನು ಕ್ವಾರಂಟೈನ್‌ಗೆ ಹಾಕಲಾಗಿದೆ.

   Padarayanapura corporator Imran Pasha shares special video from quaratine centre | Oneindia Kannada

   ಭಾನುವಾರ ರಾತ್ರಿ ಇಮ್ರಾನ್ ಪಾಷಾ ಫೇಸ್‌ಬುಕ್ ಮೂಲಕ ವಿಡಿಯೋವೊಂದನ್ನು ಹಾಕಿದ್ದಾರೆ. ತಮ್ಮ ವಾರ್ಡ್‌ನ ಜನರಿಗೆ, ಮಾಧ್ಯಮಗಳ ಹಲವು ವಿಚಾರಗಳನ್ನು ಹೇಳಿದ್ದಾರೆ. ಮಾಧ್ಯಮದಲ್ಲಿ ಬಂದ ವರದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

   ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಶ್ರೀರಾಮುಲು ಎಚ್ಚರಿಕೆ!

   ಬಿಬಿಎಂಪಿ ಕಾರ್ಪೊರೇಟರ್‌ ಇಮ್ರಾನ್‌ ಪಾಷಾ ಹಾಗೂ ಅವರ ಬೆಂಬಲಿಗರ ವಿರುದ್ಧ ಜೆ. ಜೆ. ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಸಹ ದಾಖಲು ಮಾಡಲಾಗಿದೆ. ಕೊರೊನಾ ವೈರಸ್‌ ಇರುವುದು ಖಚಿತವಾದ ಬಳಿಕವೂ ಆಸ್ಪತ್ರೆಗೆ ತೆರಳಲು ವಿಳಂಬ ಮಾಡಿದ್ದಕ್ಕೆ ಮತ್ತು ಜನರ ಗುಂಪು ಸೇರಲು ಕಾರಣವಾಗಿದ್ದಕ್ಕೆ ಪ್ರಕರಣ ದಾಖಲಾಗಿದೆ.

   ಪಾದರಾಯನಪುರ ಸೀಲ್ ಡೌನ್, ಕಾರ್ಪೋರೇಟರ್ ವಿರುದ್ಧ ಎಫ್ಐಆರ್!

   ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬನೋತ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಾಂಕ್ರಮಿಕ ರೋಗ ಹರಡಲು ಪ್ರಯತ್ನಿಸಿದ ಹಾಗೂ ಅಕ್ರಮವಾಗಿ ಗುಂಪು ಸೇರಿಸಿದ್ದಾರೆ ಎಂದು ದೂರು ನೀಡಲಾಗಿತ್ತು" ಎಂದು ಹೇಳಿದ್ದಾರೆ.

   ವಿಡಿಯೋದಲ್ಲಿ ಏನಿದೆ? : ಕೊರೊನಾ ವೈರಸ್ ಸೋಂಕು ಬಂದಿದ್ದು ತಿಳಿದಿದ್ದರೂ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಲು ವಿಳಂಬ ಮಾಡಿದರು ಎಂಬ ವರದಿ ಬರುತ್ತಿದೆ. ನಾನು ಒಬ್ಬ ಜನಪ್ರತಿನಿಧಿಯಾಗಿ, ನಾಲ್ಕು ಜನರಿಗೆ ಬುದ್ಧಿ ಹೇಳುವ ಶಕ್ತಿ ಇಂಹತ ಕೆಲಸ ಮಾಡಲು ಸಾಧ್ಯವೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

   ವಿಡಿಯೋ ಇಲ್ಲಿದೆ....

   ಶನಿವಾರ ಇಮ್ರಾನ್ ಪಾಷಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಬಿಬಿಎಂಪಿ ಅಧಿಕಾರಿಗಳು ಆಂಬ್ಯುಲೆನ್ಸ್ ತೆಗೆದುಕೊಂಡು ಹೋಗಿದ್ದರು. ಆಗ ನೂರಾರು ಜನರು ಸೇರಿದ್ದರು. ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದರೂ ಸಾಮಾಜಿಕ ಅಂತ ಕಾಯ್ದುಕೊಳ್ಳುವಲ್ಲಿ ಅವರು ವಿಫಲರಾಗಿದ್ದರು.

   English summary
   Bengalur Padarayanapura municipal ward corporator Imran Pasha video from quarantine center. Imran Pasha under quarantine after he tested positive for COVID - 19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X