ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಕುಸಿದುಬಿದ್ದ ಕಾರ್ಪೊರೇಟರ್‌ ರೂಪಾ ಲಿಂಗೇಶ್‌

By Nayana
|
Google Oneindia Kannada News

ಬೆಂಗಳೂರು, ಜು.6: ಬಿಬಿಎಂಪಿ ಕೌನ್ಸಿಲ್‌ ಸಭೆ ನಡೆಯುವಾಗ ಕಾರ್ಪೊರೇಟರ್‌ ಅನಾರೋಗ್ಯದಿಂದ ಕುಸಿದು ಬಿದ್ದಿರುವ ಘಟನೆ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದಿದೆ.

ರಾಜ್ಯ ಬಜೆಟ್‌ ಗುರುವಾರ ಮಂಡನೆಯಾಗಿದೆ ಬೆಂಗಳೂರಿಗೆ ಬಹುಪಾಲು ಹಣವನ್ನು ಮೀಸಲಿಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲೂ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿಗೆ ಹಣ ಮೀಸಲಿಡಲಾಗಿದೆ. ಈ ಕುರಿತು ಶುಕ್ರವಾರ ಬಜೆಟ್‌ ನಂತರದ ಕೌನ್ಸಿಲ್‌ ಸಭೆಯನ್ನು ಕರೆದಿದ್ದರು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯೆ ರೂಪಾ ಲಿಂಗೇಶ್‌ ಅವರು ಉಸಿರಾಟದ ತೊಂದರೆಯಿಂದಾಗಿ ಕುಸಿದು ಬಿದ್ದಿದ್ದಾರೆ.

ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಉಚಿತ ವೈ-ಫೈ ಸೌಲಭ್ಯಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಉಚಿತ ವೈ-ಫೈ ಸೌಲಭ್ಯ

ಅವರು ಬಿಬಿಎಂಪಿ 106 ಸದಸ್ಯರಾಗಿದ್ದಾರೆ, ತಕ್ಷಣಕ್ಕೆ ಪಾಲಿಕೆ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಮಲ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಅವರು ಉಳಿದ ಸದಸ್ಯರ ಜತೆ ಸೇರಿ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

Corporator Roopa Lingesh feel down during council meeting

ಇನ್ನು ರೈತರ ಸಾಲಮನ್ನಾ ವಿಚಾರವಾಗಿ ಪ್ರತಿ ರೈತ ಕುಟುಂಬಗಳಿಗೆ ಎರಡು ಲಕ್ಷದವರೆಗೆ ಸಾಲ ಮನ್ನಾ ಮಾಡಿದರೆ ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಹಾಗಾಗಿ ಸರ್ಕಾರಕ್ಕೆ ಸ್ವಲ್ಪ ಮಟ್ಟಿಗೆ ಸಹಾಯ ಮಾಡುವ ದೃಷ್ಟಿಯಿಂದ ಬಿಬಿಎಂಪಿ ಮೇಯರ್‌ ಸಂಪತ್‌ ರಾಜ್‌ ತನ್ನ ಎರಡು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಲು ನಿರ್ಧರಿಸಿದ್ದಾರೆ.

English summary
BBMP corporator 106 ward Roopa lingesh fell down during BBMP council meeting. she was suffering from some health issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X