ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದಲ್ಲಿ ವ್ಯಾಪಕ ಭ್ರಷ್ಟಾಚಾರ: ಎಎಪಿ ಆರೋಪ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15: ಬೆಂಗಳೂರಿನ ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ಮಂಡಳಿಯ ಹಣದ ದಾಹಕ್ಕೆ ನೂರಾರು ರೋಗಿಗಳು ಬಲಿಯಾಗಿದ್ದಾರೆ ಎಂದು ಬೆಂಗಳೂರು ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಹೃದ್ರೋಗ ವಿಭಾಗವನ್ನು ಇಎಸ್‍ಐನಿಂದ ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆ ಎದುರು ಬುಧವಾರ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, "ಇಎಸ್‍ಐಯಲ್ಲಿರುವ ಹೃದ್ರೋಗ ವಿಭಾಗದಲ್ಲಿ 50ಕ್ಕೂ ಹೆಚ್ಚು ವೆಂಟಿಲೇಟರ್ ಬೆಡ್‌ಗಳಿವೆ, ಅತ್ಯಾಧುನಿಕ ಸೌಲಭ್ಯಗಳಿವೆ. 15 ಸರ್ಜನ್‍ಗಳು, ನೂರಾರು ಸಿಬ್ಬಂದಿ ಅಲ್ಲಿಗೆ ನೇಮಕಗೊಂಡಿದ್ದಾರೆ. ಬೇರೆಲ್ಲ ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿಯಾಗಿದ್ದರೂ ಕೂಡ ಇಲ್ಲಿ ಬೆಡ್‌ಗಳು ಖಾಲಿಯಿರಲು ಕಾರಣವೇನು ಎಂದು ನಾವು ಯೋಚಿಸಬೇಕು. ಇಎಸ್‍ಐನ ಹೃದ್ರೋಗ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಖಾಸಗಿ ಆಸ್ಪತ್ರೆಗಳೊಂದಿಗೆ ಅಕ್ರಮ ಒಳ ಒಪ್ಪಂದ ಮಾಡಿಕೊಂಡಿರುವ ಇಲ್ಲಿನ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಆಸ್ಪತ್ರೆಯನ್ನು ಹಾಳುಗೆಡವುತ್ತಿದ್ದಾರೆ," ಎಂದು ಆರೋಪಿಸಿದರು.

 Corruption Behind Shifting Of Cardiology Unit From ESI Hospital Rajajinagar: AAP

2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‍ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕು ಎಂದು ಗುರಿ ನಿಗದಿಪಡಿಸಲಾಗಿದೆ. ಈ ರೀತಿಯ ಒಪ್ಪಂದವು ಆರೋಗ್ಯ ಇಲಾಖೆಯ ವ್ಯಾಪಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಚಿಕಿತ್ಸೆಯನ್ನು ಸೇವೆಯನ್ನು ಪರಿಗಣಿಸುವ ಬದಲು ವ್ಯಾಪಾರವೆಂದು ಸರ್ಕಾರವೇ ಪರಿಗಣಿಸಿರುವುದು ನಾಚಿಕೆಗೇಡು ಎಂದು ದೂರಿದರು.

ಜಯದೇವ ಆಸ್ಪತ್ರೆಯೊಂದಿಗಿನ ಒಪ್ಪಂದ ನವೆಂಬರ್‌ನಲ್ಲಿ ಅಂತ್ಯವಾದ ನಂತರ ಖಾಸಗಿ ಆಸ್ಪತ್ರೆ ಜೊತೆ ಒಪ್ಪಂದಕ್ಕೆ ಸಿದ್ಧತೆ ನಡೆಸಲಾಗುತ್ತಿರುವುದು ಖಂಡನೀಯ. ಇಎಸ್‍ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಎಲ್ಲ ಅಕ್ರಮಗಳಿಗೆ ಇಲ್ಲಿನ ಆಡಳಿತ ಮಂಡಳಿ ನೇರ ಕಾರಣ. ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರಧಾನಿ, ರಾಷ್ಟ್ರಪತಿ, ಸಿಬಿಐ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಗೆ ದೂರು ನೀಡುತ್ತೇವೆ," ಎಂದು ಮೋಹನ್ ದಾಸರಿ ಹೇಳಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ. ನಾಗಣ್ಣ ಮಾತನಾಡಿ, "ಇಎಸ್‌ಐನ ಅಕ್ರಮಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಕಾರ್ಮಿಕರಿಗೆ ಮಾತ್ರ ಸೀಮಿತವಾಗಿರುವ ಹೃದ್ರೋಗ ವಿಭಾಗವನ್ನು ಎಲ್ಲ ಸಾರ್ವಜನಿಕರಿಗೆ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಕೋವಿಡ್ ಆತಂಕವಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಇನ್ನಷ್ಟು ಆಧುನೀಕರಣಗೊಳಿಸಲು ಮುಂದಾಗುವ ಬದಲು ಇರುವ ಸೌಲಭ್ಯಗಳನ್ನೂ ಕಿತ್ತುಕೊಳ್ಳುತ್ತಿರುವುದು ಖಂಡನೀಯ ಎಂದು ಹೇಳಿದರು.

 Corruption Behind Shifting Of Cardiology Unit From ESI Hospital Rajajinagar: AAP

ಪ್ರತಿಭಟನೆಯಲ್ಲಿ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಪಕ್ಷದ ಮುಖಂಡರಾದ ರಾಜಶೇಖರ್ ದೊಡ್ಡಣ್ಣ, ದಿನೇಶ್ ಕುಮಾರ್, ಪ್ರಕಾಶ್ ನೆಡಂಗಡಿ, ಡಾ. ಸತೀಶ್ ಕುಮಾರ್, ಚನ್ನಬಸಪ್ಪ ಹಾಗೂ ಇತರೆ ಮುಖಂಡರು, ನೂರಾರು ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಆಮ್ ಆದ್ಮಿ ಪಾರ್ಟಿಯಿಂದ ಇಂಜಿನಿಯರ್ಸ್ ಡೇ ಶುಭಾಶಯ
ಇಂಜಿನಿಯರ್ಸ್ ಡೇ 2021ರ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಬುಧವಾರ ದೆಹಲಿಯ ಮೂಲಸೌಕರ್ಯದ ಬಗ್ಗೆ ಹೆಗ್ಗಳಿಕೆ ಹೊಂದಿದ್ದು, ರಾಷ್ಟ್ರ ರಾಜಧಾನಿಯಾದ್ಯಂತವಿರುವ ಕಟ್ಟಡಗಳ ಕೆಲವು ಆಯ್ದ ಫೋಟೋಗಳನ್ನು ಶೇರ್ ಮಾಡಿದೆ. ಟ್ವಿಟರ್‌ನಲ್ಲಿ ತನ್ನ ಅಧಿಕೃತ ಹ್ಯಾಂಡಲ್‌ನಿಂದ ಚಿತ್ರಗಳನ್ನು ಹಂಚಿಕೊಂಡಿರುವ ಪಕ್ಷವು ತನ್ನ ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ರನ್ನು ಶ್ಲಾಘಿಸಿತು. ಕೇಜ್ರಿವಾಲ್ ಅತ್ಯುತ್ತಮ ಇಂಜಿನಿಯರಿಂಗ್ ಸಂಸ್ಥೆಗಳಲ್ಲಿ ಒಂದಾದ ಪ್ರತಿಷ್ಠಿತ ಖರಗ್‌ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಹಳೆಯ ವಿದ್ಯಾರ್ಥಿಯಾಗಿದ್ದಾರೆ ಎಂದು ಬರೆದುಕೊಂಡಿದೆ.

ದೆಹಲಿಯ ಕಟ್ಟಡಗಳ ಫೋಟೋಗಳನ್ನು ಟ್ವೀಟ್ ಮಾಡಿದ ಎಎಪಿ, "ನೀವು ಐಐಟಿ ಎಂಜಿನಿಯರ್ ಅನ್ನು ನಿಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದಾಗ ಹೀಗಾಗುತ್ತದೆ," ಎಂದು ಬರೆದಿದೆ.

Recommended Video

ಅಫ್ಘಾನ್ ಟೀಮ್ ಗೆ ಬಿತ್ತು ದೊಡ್ಡ ಏಟು! | Oneindia Kannada

"ಇಂಜಿನಿಯರ್ಸ್ ದಿನದಂದು, ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿರುವ ಮತ್ತು ಅತ್ಯಂತ ಸಮರ್ಪಣೆ, ಜ್ಞಾನ ಮತ್ತು ಕಠಿಣ ಪರಿಶ್ರಮದಿಂದ ಹಲವಾರು ಹೊಸ ಆವಿಷ್ಕಾರಗಳನ್ನು ಮಾಡುತ್ತಿರುವ ಎಲ್ಲ ಎಂಜಿನಿಯರ್‌ಗಳಿಗೆ ನಾನು ಶುಭ ಹಾರೈಸುತ್ತೇನೆ," ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

English summary
The Aam Aadmi Party staged a protest in front of ESI Hospital in Rajajinagar for condemning the relocation of the cardiology unit to Bannerghatta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X