ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲ್ ತೆಲಗಿ ಆರೋಗ್ಯ ಸ್ಥಿತಿ ಗಂಭೀರ
ಬೆಂಗಳೂರು, ಅಕ್ಟೋಬರ್ 23: ಬಹುಕೋಟಿ ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲ್ ತೆಲಗಿ (56) ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ತೆಲಗಿ ಮೆದುಳುಜ್ವರದಿಂದ ಬಳಲುತ್ತಿದ್ದು, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂಬ ವಿಚಾರವನ್ನು ತೆಲಗಿ ವಕೀಲರಾದ ಎಂ.ಟಿ.ನಾಣಯ್ಯ ಅವರು ಸೋಮವಾರ ರಾತ್ರಿ ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ. ಮೆದುಳುಜ್ವರದಿಂದ ಬಳಲುತ್ತಿರುವ ತೆಲಗಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ತೆಲಗಿ ಮೃತಪಟ್ಟಿದ್ದಾರೆ ಎಂಬ ಸುದ್ದಿಯನ್ನು ವಕೀಲರಾದ ನಾಣಯ್ಯ ಅವರು ನಿರಾಕರಿಸಿದ್ದಾರೆ. ಆದರೆ ವಿಕ್ತೋರಿಯಾ ಆಸ್ಪತ್ರೆಯಲ್ಲಿ ತೆಲಗಿ ಚಿಕಿತ್ಸೆ ಪಡೆಯುತ್ತಿದ್ದು, ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ ಎಂದು ಕೂಡ ತಿಳಿಸಿದ್ದಾರೆ.

ಬಹುಕೋಟಿ ನಕಲಿ ಛಾಪಾ ಕಾಗದ ಕರೀಂ ಲಾಲ್ ತೆಲಗಿಯನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಆತ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇದ್ದ. ಆತನ ಕೆಲವು ಸಂಬಂಧಿಕರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದ್ದಾರೆ.












Click it and Unblock the Notifications