ವಿಜಯನಗರದಲ್ಲಿ ಸಿಲಿಂಡರ್ ಸ್ಫೋಟ: ದಂಪತಿ ದುರ್ಮರಣ
ಬೆಂಗಳೂರು, ಅಕ್ಟೋಬರ್ 17: ಸಿಲಿಂಡರ್ ಸ್ಫೋಟ ಸಂಭವಿಸಿ ದಂಪತಿಗಳು ಮೃತಪಟ್ಟಿರುವ ಘಟನೆ ಬೆಂಗಳೂರಿನ ಮೂಡಲಪಾಳ್ಯದಲ್ಲಿ ಬುಧವಾರ ಸಂಜೆ ನಡೆದಿದೆ.
ಶೀಟಿನ ಮನೆಯಲ್ಲಿ ಅನಿಲ ಸೋರಿಕೆ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ಮೂಲದ ದಂಪತಿ ಶಿವಣ್ಣ ಹಾಗೂ ಮಂಗಮ್ಮ ಸಾವನ್ನಪ್ಪಿದ್ದಾರೆ, ವಿಜಯನಗರದ ಮೂಡಲಪಾಳ್ಯದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳದ ತಂಡ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರೊಳಗೆ ದಂಪತಿಗಳು ಬೆಂದು ಹೋಗಿದ್ದರು.

ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀಟಿನ ಮನೆಯಲ್ಲಿ ಅನಿಲ ಸೋರಿಕೆಯಾಗಿ ಘಟನೆ ಸಂಭವಿಸಿದೆ.












Click it and Unblock the Notifications