Yediyurappa: ಯಾವ ಕ್ಷಣದಲ್ಲಾದರೂ ಯಡಿಯೂರಪ್ಪ ಬಂಧನ
ಬೆಂಗಳೂರು, ಜೂನ್ 13: ಕರ್ನಾಟಕ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ'ಯಡಿ ದಾಖಲಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಐಡಿ ತನಿಖೆ ನಡೆಸುತ್ತಿದ್ದು, ಇದೀಗ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶಿಸಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಇದನ್ನು ಸದ್ಯ ಕೇಂದ್ರ ತನಿಖಾ ದಳ (ಸಿಐಡಿ) ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು. ಇದರ ಬೆನ್ನಲ್ಲೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ಬುಧವಾರವಷ್ಟೇ (ಜೂನ್ 12ರಂದು) ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾರಜಾಗುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೆ ಇಂದು ನ್ಯಾಯಾಲಯ ಅವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14ರಂದು ದೂರು ನೀಡಲಾಗಿತ್ತು. ಅದಾದ ಬಳಿಕ ಪೊಲೀಸರ ಮುಂದೆ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿದ್ದರು.
ಈ ವೇಳೆ ಪೋಕ್ಸೋ ಪ್ರಕರಣವನ್ನು ಕರ್ನಾಟಕ ರಾಜ್ಯ ಸರ್ಕಾರ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಯಿತು. ಅಲ್ಲಿಂದ ತನಿಖೆ ನಡೆಸಿರುವ ಅಧಿಕಾರಿಗಳು ಇದೀಗ ಬಂಧನಕ್ಕೆ ಸಜ್ಜಾಗಿದ್ದಾರೆ. ಯಾವ ಕ್ಷಣದಲ್ಲಾದರೂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ.
ಎಲ್ಲಿದ್ದಾರೆ ಯಡಿಯೂರಪ್ಪ?
ಸದ್ಯ ಪ್ರಕರಣ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಯಡಿಯೂರಪ್ಪ ಅವರ ಬಂಧನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಿಬಿಐ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಕಾರದಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಬಿಎಸ್ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಭೇಟಿ ನೀಬಹುದು.
ಸದ್ಯ ಯಡಿಯೂಪ್ಪ ಅವರು ಬೆಂಗಳೂರಿನಲ್ಲಿ ಇಲ್ಲ ಎನ್ನಲಾಗಿದೆ. ಅವರು ದೆಹಲಿಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಂಧವನಂತೂ ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ.












Click it and Unblock the Notifications