ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
Recommended Video

ಮಾನಹಾನಿ ಪ್ರಕರಣ, ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಅರೆಸ್ಟ್ ವಾರೆಂಟ್
ಬೆಂಗಳೂರು, ಡಿಸೆಂಬರ್ 14:ಪತ್ರಕರ್ತ ರವಿ ಬೆಳಗೆರೆ ಅವರಿಗೆ ಸುಪಾರಿ ಕೇಸಿನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ.
7 ವರ್ಷಗಳ ಹಿಂದೆ ದಾಖಲಾಗಿದ್ದ ಮಾನಹಾನಿ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನಿಂದ ರವಿ ಬೆಳಗೆರೆ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ.

ಏಳು ವರ್ಷಗಳಿಂದ ವಿಚಾರಣೆಗಾಗಿ ಕೋರ್ಟ್ ಮೆಟ್ಟಿಲೇರದ ಕಾರಣ, ರವಿ ಬೆಳಗೆರೆ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ನಿರ್ದೇಶಿಸಲಾಗಿದೆ. ರವಿ ಅವರನ್ನು ವಶಕ್ಕೆ ಪಡೆದು, ಹಾಜರುಪಡಿಸುವಂತೆ ಸಂಜಯನಗರ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.
ಸಂಜಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಮಹಿಳೆಯೊಬ್ಬರ ವಿರುದ್ಧ ಏಳು ವರ್ಷಗಳ ಹಿಂದೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಇದರ ವಿರುದ್ಧ ಕೆರಳಿದ್ದ ಆ ಮಹಿಳೆ, ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಳೆದ ಏಳು ವರ್ಷಗಳಿಂದ ವಿಚಾರಣೆ ಜಾರಿಯಲ್ಲಿದ್ದು, ಒಮ್ಮೆ ಕೂಡಾ ರವಿ ಬೆಳಗೆರೆ ಅವರು ವಿಚಾರಣೆಗೆ ಹಾಜರಾಗಿಲ್ಲ.












Click it and Unblock the Notifications