• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊವಿಡ್ 19 ನಿಯಂತ್ರಣ ಪರಿಣಾಮಕಾರಿ ಕಾರ್ಯತಂತ್ರ: ಸುಧಾಕರ್

|

ಬೆಂಗಳೂರು, ಜುಲೈ 15: ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು ಅದರ ಅನ್ವಯ ಕಾರ್ಯ ನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

   Dhoni ಜೊತೆ ಆಡೋದು ತುಂಬಾ ಖುಷಿ ಕೊಡುತ್ತೆ ಎಂದ Pant | Oneindia Kannada

   ಎರಡು ತಾಸಿಗೂ ಹೆಚ್ಚು ಕಾಲ ಅಧಿಕಾರಗಳ ಜತೆ ವಿಡಿಯೋ ಸಂವಾದದ ಮೂಲಕ ಚರ್ಚಿಸಿ ಮಾಹಿತಿ ಪಡೆದ ಸಚಿವರು, ನಿರ್ದಿಷ್ಟ ಹೊಣೆಗಾರಿಕೆ ವಹಿಸಿಕೊಂಡಿರುವ ಅಧಿಕಾರಿಗಳು ಇತರೆ ಸಹೋದ್ಯೋಗಿಗಳ ಜತೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

   1419 ನರ್ಸ್, 506 ಲ್ಯಾಬ್ ಟೆಕ್ನಿಷಿಯನ್ ನೇಮಕ: ಸುಧಾಕರ್

   ಲಾಕ್ ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನ ಬೂತ್ ಮಟ್ಟದಲ್ಲಿ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಸಮಿತಿಗಳ ರಚನೆ ತರಬೇತಿ ಪ್ರಕ್ರಿಯೆ ಒಂದೆರಡು ದಿನಗಳಲ್ಲಿ ಮುಗಿಸಬೇಕು. ಆ ನಂತರ ಸಮಿತಿ ಸದಸ್ಯರು ತಮಗೆ ನಿಗದಿಗೊಳಿಸಿರುವ ಬೂತ್ ಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದರು.

   ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ :

   ಸಮೀಕ್ಷೆ ವೇಳೆ ಐಎಲ್ ಐ ಮತ್ತು ಸಾರಿ ಪ್ರಕರಣಗಳ ತಪಾಸಣೆ ನಡೆಸಿ ರೋಗ ಲಕ್ಷಣ ಆಧರಿಸಿ ಅವರನ್ನು ಹೋಮ್ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಸಮಿತಿ ಸದಸ್ಯರಿಗೆ ಮಾರ್ಗಸೂಚಿ ಬಗ್ಗೆ ತರಬೇತಿ ಸಮಯದಲ್ಲೇ ಮನವರಿಕೆ ಮಾಡಿಕೊಡಬೇಕು. ಅವರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಒದಗಿಸಬೇಕು. ಆಂಬ್ಯುಲೆನ್ಸ್ ಒದಗಿಸುವುದು ಸಮಿತಿ ಜವಾಬ್ದಾರಿ ಆಗಬೇಕು. ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ ಆಗಬೇಕು ಎಂದು ತಿಳಿಸಿದರು.

   ಬೆಡ್, ಐಸಿಯು ಇಲ್ಲ ಎಂದು ಚಿಕಿತ್ಸೆ ಕೊಡದ ಆಸ್ಪತ್ರೆ ಲೈಸನ್ಸ್ ರದ್ದು!

   ವಲಯವಾರು ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಈ ಎಲ್ಲಾ ಕೆಲಸಗಳ ಮೇಲೆ ನಿಗಾವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಜತೆಗೆ ತಮ್ಮ ವ್ಯಾಪ್ತಿಗೆ ಸೇರಿರುವ ಲ್ಯಾಬ್ ಗಳ ಪರೀಕ್ಷೆ ಮತ್ತು ಕಾರ್ಯ ನಿರ್ವಹಣೆ ಮೇಲೂ ನಿಗಾ ಇಡಬೇಕು. ಒಂದು ವಾರದೊಳಗೆ ಯಾವುದೇ ಸ್ಯಾಂಪಲ್ ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದರ ಸಮನ್ವಯವನ್ನು ಹಿರಿಯ ಅಧಿಕಾರಿ ಶಾಲೀನಿ ರಜನೀಶ್ ಅವರು ನೋಡಿಕೊಳ್ಳಬೇಕು ಎಂದು ಸೂಚಿಸಿದರು.

   ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಸೌಲಭ್ಯಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಪಾಸಿಟಿವ್ ಆದವರನ್ನು ಸರ್ಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡುವ ಕೆಲಸ ಆಗಬೇಕು. ಇದಕ್ಕಾಗಿ ಮುಂಬಯಿ ಧಾರಾವಿಯಲ್ಲಿ ಅಳವಡಿಸಿಕೊಂಡಿರುವ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.

   ವಲಯವಾರು ಅಗತ್ಯ ವಿರುವ ವಾಹನ ಮತ್ತು ಸಿಬ್ಬಂದಿ ಕೊರತೆಯನ್ನು ಬಿಬಿಎಂಪಿ ಆಯುಕ್ತರು ನಿರ್ವಹಿಸಬೇಕು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಕೊರತೆ ನಿವಾರಿಸುವ ಕೆಲಸವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ನೋಡಿಕೊಳ್ಳಬೇಕು ಎಂದು ಆದೇಶ ನೀಡಿದರು.

   English summary
   Medical Education Minister Dr.K.Sudhakar instructs zonal in-charge officers to follow the strategical plan to tackle Covid-19 effectively. In a video Conference with the officials urged them to have better coordination with colleges for executing Covid tasks.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more