ಬೆಂಗಳೂರಿನಲ್ಲಿ ಆರೇ ದಿನಕ್ಕೆ 1 ಲಕ್ಷ ಗಡಿ ದಾಟಿದ ಕೊರೊನಾ ಪಾಸಿಟಿವ್ !
ಬೆಂಗಳೂರು, ಏಪ್ರಿಲ್ 26: ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಆರು ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ಗಟಿ ದಾಟಿದೆ. ಏ. 19 ರಂದು ಕೇವಲ 10 ಸಾವಿರ ಮಂದಿಗೆ ಕೊರೊನಾ ಪಾಸಿಟೀವ್ ಇತ್ತು. ಇದೀಗ ಏ. 26 ರ ವೇಳೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1.07, 021 ಕ್ಕೇರಿದೆ. ನೆರೆಯ ರಾಜ್ಯ ಇಡೀ ತಮಿಳುನಾಡಿನಲ್ಲಿರುವ ಅಷ್ಟೂ ಕೇಸುಗಳನ್ನು ಪರಿಗಣಿಸಿದರೆ ಬೆಂಗಳೂರು ಅದನ್ನು ಮೀರಿಸಿದೆ. ಇನ್ನು ಈ ಆರು ದಿನದಲ್ಲಿ ಕೊರೋನಾ ಸೋಂಕಿಗೆ ಸೂಕ್ತ ಚಿಕಿತ್ಸೆ ಇಲ್ಲದೇ 677 ಮಂದಿ ಬಲಿಯಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಕೈ ತಪ್ಪಿದೆ. ಗಲ್ಲಿ ಗಲ್ಲಿಯಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇತ್ತ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ. ಆಮ್ಲಜನಕವಿಲ್ಲ, ಹಾಸಿಗೆಯೂ ಇಲ್ಲ, ಸಾವನ್ನಪ್ಪಿದ ರೋಗಿಗಳಿಗೆ ಸ್ಮಶಾನದಲ್ಲಿ ಜಾಗವೂ ಇಲ್ಲ ಎಂಬಂತಾಗಿದೆ ಪರಿಸ್ಥಿತಿ. ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಪಡೆಯಲು ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಯಾವುದೂ ಫಲ ಕೊಡುತ್ತಿಲ್ಲ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.
ಏ. 24 ಹೆಚ್ಚು ಸಾವು : ಏಪ್ರಿಲ್ 24 ರಂದು 149 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೆ 20 ಸಾವಿರ ಕೊರೊನಾ ಪಾಸಿಟೀವ್ ಕೇಸ್ಗಳು ದಾಖಲಾಗುತ್ತಿವೆ. ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ಕೇವಲ 9 ಸಾವಿರ ಸೋಂಕಿತರಿದ್ದರು. ಇದೀಗ ಏಕಾಏಕಿ ಒಂದು ಲಕ್ಷಕ್ಕೆ ಏರಿಕೆಯಾಗಿದೆ. ಕೇವಲ ಆರು ದಿನದಲ್ಲಿ ಈ ಪರಿಯ ಪ್ರಕರಣಗಳು ಪತ್ತೆಯಾಗಿವೆ.

ಏಪ್ರಿಲ್ 19 - 9618 ಕೇಸ್ - 97 ಸಾವು
ಏಪ್ರಿಲ್ 20 - 13782 ಕೇಸ್ - 92 ಸಾವು
ಏಪ್ರಿಲ್ 21 - 13640 ಕೇಸ್ - 70 ಸಾವು
ಏಪ್ರಿಲ್ 22 - 15244 ಕೇಸ್ - 68 ಸಾವು
ಏಪ್ರಿಲ್ 23 - 16662 ಕೇಸ್ - 124 ಸಾವು
ಏಪ್ರಿಲ್ 24 - 17342 ಕೇಸ್ - 149 ಸಾವು
ಏಪ್ರಿಲ್ 25 - 20733 ಕೇಸ್ - 77 ಸಾವು
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications