ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕು: ಬೆಂಗಳೂರು ಕರಗ ಮೆರವಣಿಗೆ ಎರಡನೇ ಬಾರಿಗೆ ರದ್ದು

|
Google Oneindia Kannada News

ಬೆಂಗಳೂರು, ಏಪ್ರಿಲ್ 20: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಬೆಂಗಳೂರು ಕರಗ ಉತ್ಸವ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ.

350 ವರ್ಷಗಳ ಇತಿಹಾಸವನ್ನು ಹೊಂದಿರುವ ಕರಗ ಉತ್ಸವ ಮೆರವಣಿಗೆ ರದ್ದಾಗುತ್ತಿರುವುದು ಇದು ಎರಡನೇ ಬಾರಿ, ಕಳೆದ ವರ್ಷ ಕೂಡ ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರದ್ದಾಗಿತ್ತು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ಸೋಂಕಿತೆ ಸಾವುಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ಸೋಂಕಿತೆ ಸಾವು

ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಸದ್ಯ ಈಗ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಸರ್ಕಾರದ ಆದೇಶದನ್ವಯ ಧಾರ್ಮಿಕ ಆಚರಣೆಗಳನ್ನು ಕೇವಲ ಸಾಂಪ್ರದಾಯಿಕವಾಗಿ ಆಚರಿಸಲು ಆದೇಶ ಹೊರಡಿಸಿದೆ.

 Covid 19: Bengaluru Karaga Procession Called Off This Year Due To Night Curfew

ಈ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ದ್ರೌಪದಿ ಕರಗ ಉತ್ಸವ ಮೆರವಣಿಗೆಯನ್ನು ಈ ವರ್ಷ ಕೂಡ ರದ್ದುಪಡಿಸಲಾಗಿದೆ. ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ದ್ರೌಪದಿ ಕರಗ ಶಕ್ತ್ಯೋತ್ಸವ ಆಚರಣೆಯ ಮೆರವಣಿಗೆಯನ್ನು ಸರ್ಕಾರ ರದ್ದುಪಡಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recommended Video

ಕೊರೊನಾ ಹಿನ್ನೆಲೆ 10ನೇ ತರಗತಿ ಪರೀಕ್ಷೆಗಳನ್ನ ರದ್ದುಗೊಳಿಸಿದ ICSE ಬೋರ್ಡ್‌! | Oneindia Kannada

ಆದರೆ ಕರಗ ನಡೆಯುವ ಧರ್ಮರಾಯ ಸ್ವಾಮಿ ದೇಗುಲದ ಸುತ್ತಮುತ್ತಲ ಪ್ರದೇಶದಲ್ಲೇ ನೂರಾರು ಮಂದಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಈ ಬಾರಿ ಕರಗ ಉತ್ಸವವನ್ನು ಸಂಪೂರ್ಣ ರದ್ದುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಕಾರಿ ಆದೇಶ ಹೊರಡಿಸಿದ್ದಾರೆ.

English summary
The Bengaluru Karaga procession has been cancelled due to the COVID-19 pandemic for the second consecutive year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X