ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಗಡಿ, ಮಾಲ್, ಬ್ಯಾಂಕ್, ಹೋಟೆಲ್‌ಗಳಿಗೆ ಭಾಸ್ಕರ್ ರಾವ್ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜೂನ್ 27: ಕೊರೊನಾ ವೈರಸ್ ಹರಡುವಿಕೆಯ ಭೀತಿಯ ನಡುವೆಯೂ ರಾಜ್ಯದಲ್ಲಿ ಅಂಗಡಿ, ಮಾಲ್, ಹೋಟೆಲ್, ಬ್ಯಾಂಕ್, ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

Recommended Video

Community spreading started in India ? The stats are scary | Oneindia Kannada

ಆದರೆ, ಕೊರೊನಾ ವಿರುದ್ಧ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಎಮ್ಮೆ ನೋಡಿಕೊಳ್ಳಲು ರಜೆ ಬೇಕು; ಪೊಲೀಸ್ ಕಾನ್ಸ್‌ಟೇಬಲ್ ರಜೆ ಪತ್ರ ವೈರಲ್ಎಮ್ಮೆ ನೋಡಿಕೊಳ್ಳಲು ರಜೆ ಬೇಕು; ಪೊಲೀಸ್ ಕಾನ್ಸ್‌ಟೇಬಲ್ ರಜೆ ಪತ್ರ ವೈರಲ್

ಈ ಕುರಿತು ಟ್ವೀಟ್ ಮಾಡಿರುವ ಭಾಸ್ಕರ್ ರಾವ್ '' ಅಂಗಡಿಗಳು, ಹೋಟೆಲ್, ಮಾಲ್, ಕಚೇರಿ, ಬ್ಯಾಂಕ್ ಹಾಗೂ ಸಂಸ್ಥೆಗಳು ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿಮಗೆ ತಿಳಿದಿದೆ. ಒಂದು ವೇಳೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸರಿಯಾಗಿ ಪಾಲಿಸಿಲ್ಲ ಅಂದ್ರೆ ನಗರ ಪೊಲೀಸರು ದಾಳಿ ನಡೆಸಿ ಕಾನೂನು ಕ್ರಮ ಜರುಗಿಸುತ್ತಾರೆ. ಈಗಾಗಲೇ ಹಲವು ಕಡೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ'' ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

ನಗರದ ಹಲವು ಕಡೆ ಈಗಾಗಲೇ ದಾಳಿ ಮಾಡಿರುವ ಪೊಲೀಸರು, ಅಂಗಡಿ ಅಥವಾ ಇನ್ನಿತರ ಸ್ಥಳಗಳಲ್ಲಿ ಮಾಲೀಕರು, ನಿರ್ವಹಕರು ಮಾಸ್ಕ್ ಧರಿಸಿಲ್ಲ ಅಂದ್ರೂ ದಂಡ ವಿಧಿಸಿ ಅಂಗಡಿ ಮುಂಗಟ್ಟು ಮುಚ್ಚಲಾಗುತ್ತಿದೆ.

Bhaskar rao warns to Shops, Malls, Banks, Hotels to take

ಗ್ರಾಹಕರು ಸಹ ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಅಂತರ ಕಾಪಾಡುವಂತೆ ಅಂಗಡಿ ಅಥವಾ ಕಚೇರಿ, ಬ್ಯಾಂಕ್ ಸಿಬ್ಬಂದಿ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾವುದು.

English summary
Bengaluru city police commissioner Bhaskar rao warns to Shops, Malls, Banks, Hotels, Offices and Establishments to take correct precautions on COVID spread.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X