ಕೊರೊನಾ ಹೆಚ್ಚಳ: 5 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಸಭೆ
ಬೆಂಗಳೂರು, ಮೇ 29: ರಾಜ್ಯದಲ್ಲಿ ಕಳೆದ 20 ದಿನಗಳಿಂದ ಲಾಕ್‌ಡೌನ್ ಜಾರಿಗೊಳಿಸಿದ್ದರೂ ಕೊರೊನಾ ಸೊಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಪ್ರತಿದಿನ 20 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.
ಹೀಗಾಗಿ, ಹೆಚ್ಚು ಸೋಂಕು ವರದಿಯಾಗುತ್ತಿರುವ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಸಭೆಯಲ್ಲಿ ಮೈಸೂರು, ಹಾಸನ, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲಾಧಿಕಾರಿಗಳು ಹಾಜರಾಗಲಿದ್ದು, ಶನಿವಾರ ಬೆಳಗ್ಗೆ 10.30ಕ್ಕೆ ಸಿಎಂ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಲಿದೆ. ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ ಕೂಡ ಭಾಗಿಯಾಗಲಿದ್ದಾರೆ.

Recommended Video
China ಆರ್ಥಿಕತೆಯಲ್ಲಿ ಮೊದಲನೇ ಸ್ಥಾನ!! | Oneindia Kannada
ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರತಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.












Click it and Unblock the Notifications