ಬೆಂಗಳೂರಿನ ದೇವಸ್ಥಾನಗಳಲ್ಲಿ ವಾರಾಂತ್ಯ, ರಜಾ ದಿನ ಸಾರ್ವಜನಿಕ ಪ್ರವೇಶ ನಿರ್ಬಂಧ

ಬೆಂಗಳೂರು, ಆಗಸ್ಟ್ 11: ಶ್ರಾವಣ ಮಾಸ ಆರಂಭವಾಗಿದ್ದು, ದೇವಸ್ಥಾನಗಳಲ್ಲಿ ಹೆಚ್ಚು ಜನರು ಸೇರುವ ಸಾಧ್ಯತೆಯಿರುವುದರಿಂದ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಂಗಳೂರು ನಗರದ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರದಲ್ಲಿ ಈಗಾಗಲೇ 144 ಸೆಕ್ಷನ್ ಜಾರಿಯಲ್ಲಿದೆ. ಇದರೊಂದಿಗೆ ದೇವಸ್ಥಾನಗಳಿಗೆ ಜನರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ದೇವಸ್ಥಾನಗಳಲ್ಲಿ ಅತಿ ಹೆಚ್ಚಿನ ಜನರು ಸೇರುತ್ತಾರೆ. ಅದರಲ್ಲೂ ವಾರಾಂತ್ಯದಲ್ಲಿ ಹಾಗೂ ರಜಾ ದಿನಗಳಲ್ಲಿ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಅಧಿಕವಿರುತ್ತದೆ. ಒಂದೆಡೆ ಹೆಚ್ಚಿನ ಜನರು ಸೇರಿದರೆ ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗುವ ಕಾರಣ ನಿರ್ಬಂಧ ಹೇರಿ ಈ ಆದೇಶ ಜಾರಿಗೊಳಿಸಿರುವುದಾಗಿ ತಿಳಿದುಬಂದಿದೆ.

Covid-19 Guidelines: Public Access Restricted To Temples On Weekends And Holidays Of Shravan Month

ರಾಜ್ಯದಲ್ಲಿ ಸೋಂಕು ನಿಯಂತ್ರಣಗೊಳ್ಳದೇ ಇರುವುದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಾಗೂ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ ಮತ್ತು ಭಾನುವಾರ ಲಾಕ್‌ಡೌನ್ ಘೋಷಣೆಯಾಗಿದೆ.

ಸಭೆ, ಸಮಾರಂಭದ ಮೇಲೆ ನಿಷೇಧ:
ಹಬ್ಬದ ಕಾಲಾವಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಗಸ್ಟ್ 7 ರಿಂದ ಆಗಸ್ಟ್ 16 ರವರೆಗೆ ಜಾರಿಗೆ ಬರುವಂತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು, ಇತರ ಕೂಟಗಳು ಮತ್ತು ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ.

ಈ ಬಾರಿಯೂ ರಾಜ್ಯದಲ್ಲಿ ಕೊರೊನಾ ಕಾರಣವಾಗಿ ಸಾರ್ವಜನಿಕ ಗಣೇಶೋತ್ಸವವನ್ನು ರದ್ದುಗೊಳಿಸುವ ಸಾಧ್ಯತೆಯಿದೆ.

ದೇಶದಲ್ಲಿಯೇ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ. ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ 5 ದಿನದಲ್ಲೇ 242 ಮಕ್ಕಳಿಗೆ ಕೊರೊನಾ:
ಕೊರೊನಾ ಮೂರನೇ ಅಲೆ ಮಕ್ಕಳ ಪಾಲಿಗೆ ಅತಿ ಹೆಚ್ಚು ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಮಧ್ಯೆ ಬೆಂಗಳೂರಿನಲ್ಲಿ 5 ದಿನಗಳಲ್ಲೇ 242 ಮಕ್ಕಳಿಗೆ ಸೋಂಕು ತಗುಲಿರುವುದು ಬುಧವಾರ ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

19 ವರ್ಷದೊಳಗಿನ 242 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ಮಾಹಿತಿ ನೀಡಿದೆ. ಅಂಕಿ-ಅಂಶಗಳ ಪ್ರಕಾರ, 9 ವರ್ಷದೊಳಗಿನ 106 ಮಕ್ಕಳಿಗೆ ಹಾಗೂ 9 ರಿಂದ 19 ವರ್ಷದೊಳಗಿನ 136 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.89ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.02ರಷ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಅತೀ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 12ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿರುವ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾಡಳಿತದೊಂದಿಗೆ ಕೊವಿಡ್ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡರುವ ಜಿಲ್ಲೆಯಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಕೊರೊನಾ ಮೂರನೇ ಅಲೆ ಆತಂಕದ ನಡುವೆ, ಸೋಂಕಿನ ಪ್ರಮಾಣವನ್ನು ತಗ್ಗಿಸುವ ಸಂಬಂಧ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+