• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೋಗಿಗಳ ಸಹಾಯಕ್ಕೆ ಎಚ್ಎಎಲ್ ನಿಂದ 2 ಆಂಬ್ಯುಲೆನ್ಸ್

|

ಬೆಂಗಳೂರು, ಆಗಸ್ಟ್ 6: ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು ಹಸ್ತಾಂತರಿಸಿಕೊಂಡರು.

   ರಸಗೊಬ್ಬರ ಮತ್ತು ಬಾಂಬ್ ಬಳಕೆಯಲ್ಲಿ ಬಳಸುವ ಅಮೋನಿಯಂ ನೈಟ್ರೇಟ್ ಸ್ಪೋ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಓಲ್ಡ್ ಏರ್ ಪೋರ್ಟ್ ರಸ್ತೆಯ ಎಚ್ಎಎಲ್ ನ ಕೋವಿಡ್ ಆರೈಕೆ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಚ್ ಎಎಲ್ ಸಂಸ್ಥೆಯಿಂದ 2 ಆಂಬ್ಯುಲೆನ್ಸ್ ಗಳನ್ನು ನೀಡಲಾಯಿತು. ಎಚ್ ಎಎಲ್ ಮುಖ್ಯಸ್ಥ ಆರ್.ಮಾಧವನ್, ಹಿರಿಯ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಸಿಆರ್ ಐ ನಿರ್ದೇಶಕ ಡಾ.ಮನೋಜ್ ಕುಮಾರ್ ಉಪಸ್ಥಿತರಿದ್ದರು.

   ದೇಶದ ಪ್ರಥಮ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ

   ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್

   ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್

   ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "200 ಹಾಸಿಗೆ ಇರುವ ಎಚ್ ಎಎಲ್ ನ ಕೋವಿಡ್ ಕೇಂದ್ರಕ್ಕೆ ಭೇಟಿ‌ ನೀಡಿ ಪರಿಶೀಲಿಸಿದ್ದು, ಅಚ್ಚುಕಟ್ಟಾಗಿ ನಡೆಯುತ್ತಿದೆ. ಈಗ ಈ ಪ್ರತಿಷ್ಠಿತ ಎಚ್ ಎಎಲ್ ಸಂಸ್ಥೆಯು ಸಿಎಸ್ ಆರ್ ಯೋಜನೆಯಡಿ ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಉಚಿತವಾಗಿ ನೀಡಿದೆ. ಈ ಮೂಲಕ ಎಚ್ ಎಎಲ್ ಮತ್ತಷ್ಟು ಜವಾಬ್ದಾರಿಯನ್ನು ತೆಗೆದುಕೊಂಡಿದೆ. ಈ ಸಂಸ್ಥೆಗೆ ಸರ್ಕಾರದ ಪರವಾಗಿ ಕೃತಜ್ಞತೆ ಅರ್ಪಿಸುತ್ತೇನೆ,'' ಎಂದರು.

   4,276 ಹಾಸಿಗೆಗಳಿವೆ ಶೇ.27 ರಷ್ಟು ಖಾಲಿ

   4,276 ಹಾಸಿಗೆಗಳಿವೆ ಶೇ.27 ರಷ್ಟು ಖಾಲಿ

   "ಬೆಂಗಳೂರಿನಲ್ಲಿ 11 ಸುಸಜ್ಜಿತ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ 4,276 ಹಾಸಿಗೆಗಳಿವೆ. ಈ ಪೈಕಿ 936 ಹಾಸಿಗೆಗಳು ಖಾಲಿ ಇವೆ. ಅಂದರೆ ಶೇ.27.79 ರಷ್ಟು ಹಾಸಿಗೆಗಳು ಖಾಲಿ ಇವೆ. ಈ ಕೇಂದ್ರಗಳಲ್ಲಿರುವ 3,346 ರೋಗಿಗಳ ಪೈಕಿ 306 ಮಂದಿಯನ್ನು ಗುರುವಾರ (ಆ.6) ಬಿಡುಗಡೆ ಮಾಡುವುದಾಗಿ ಹೇಳಲಾಗಿದೆ,'' ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

   ಕೊವಿಡ್ ಮರಣ ದರ‌: ಮಹಾರಾಷ್ಟ್ರ, ದೆಹಲಿಗಿಂತ ರಾಜ್ಯವೇ ಉತ್ತಮ

   ಮಳೆ ಹಾನಿ ನಿರ್ವಹಣೆ

   ಮಳೆ ಹಾನಿ ನಿರ್ವಹಣೆ

   ಮಳೆ ಹಾನಿ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "ಇಂದು ರಾಜ್ಯದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ. ಕೋವಿಡ್ ಜೊತೆಗೆ ಮಳೆಹಾನಿಯ ಸ್ಥಿತಿಯನ್ನೂ ಸರ್ಕಾರ ನಿಭಾಯಿಸುತ್ತಿದೆ. ಈ ಎಲ್ಲ ಹೊಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಸ್ಯೆ ಬಗೆಹರಿಸಲು ಸಭೆಗಳನ್ನು ನಡೆಸಿದ್ದಾರೆ. ಕೊಡಗು, ಬೆಳಗಾವಿ ಸೇರಿದಂತೆ ಹೆಚ್ಚು ಮಳೆಯಾದ ಆರೇಳು ಜಿಲ್ಲೆಗಳಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸೂಕ್ತ ವ್ಯವಸ್ಥೆ ಮಾಡಲಾಗಿದೆ,'' ಎಂದು ತಿಳಿಸಿದರು.

   ಸಾವಿನ ಪ್ರಮಾಣವೂ ಕಡಿಮೆಯಾಗಿದೆ

   ಸಾವಿನ ಪ್ರಮಾಣವೂ ಕಡಿಮೆಯಾಗಿದೆ

   "ಕೊರೊನಾ ವೈರಸ್ ಒಂದೊಂದು ದೇಶದಲ್ಲಿ ಒಂದೊಂದು ರೀತಿ ವರ್ತಿಸುತ್ತದೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳಾಗಬೇಕಿದೆ. ಸರ್ಕಾರ ಪರೀಕ್ಷೆ ಮಾಡುವುದು, ಚಿಕಿತ್ಸೆ ನೀಡುವುದು ಮೊದಲಾದ ಕ್ರಮಗಳನ್ನು ಕೈಗೊಂಡಿದೆ. ಕೆಲ ದಿನಗಳಿಂದ ರಾಜ್ಯದಲ್ಲಿ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದೆ. ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ವಿರೋಧ ಮಾಡುವವರು ಈ ಅಂಕಿ ಅಂಶಗಳನ್ನು ನೋಡಬೇಕು,'' ಎಂದರು.

   ರಾಜ್ಯದಲ್ಲಿ ಗುಣಮುಖರಾಗುವವರ ಪ್ರಮಾಣ ಶೇ.5 ರಷ್ಟು ಏರಿಕೆ: ಸುಧಾಕರ್

   English summary
   COVID-19: HAL Donates Ambulances to Govt Hospital and HAL Established COVID-19 Care Centre with 160 beds is now enhanced to 178 beds and fully occupied said Medical Education minister Dr D Sudhakar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X