ಇನ್ಫೋಸಿಸ್ ಫೌಂಡೇಷನ್‍ನಿಂದ 100 ಹಾಸಿಗೆಗಳ ಕ್ವಾರಂಟೈನ್ ಸೌಲಭ್ಯ
ಬೆಂಗಳೂರು, ಏಪ್ರಿಲ್ 1: ಇನ್ಫೋಸಿಸ್ ಸಂಸ್ಥೆಯ ಜನೋಪಕಾರಿ ಅಂಗಸಂಸ್ಥೆಯಾಗಿರುವ ಇನ್ಫೋಸಿಸ್ ಫೌಂಡೇಷನ್ ಮತ್ತು ದೇಶದ ಅತಿ ದೊಡ್ಡ ಆರೋಗ್ಯ ರಕ್ಷಣೆ ಸೇವಾದಾರ ಸಂಸ್ಥೆಗಳಲ್ಲಿ ಒಂದಾಗಿರುವ ನಾರಾಯಣ ಹೆಲ್ತ್ ಸಹಯೋಗದಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್-19 ರೋಗಿಗಳಿಗೆ 100 ಹಾಸಿಗೆಗಳ ಕ್ವಾರಂಟೈನ್ ಸೌಲಭ್ಯವನ್ನು ನಿರ್ಮಿಸಿವೆ.
ಸಮಾಜದಲ್ಲಿನ ಆರ್ಥಿಕವಾಗಿ ಹಿಂದುಳಿದ ವರ್ಗದ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಇಲ್ಲಿ ರೋಗಿಗಳಿಗೆ ಕ್ವಾರಂಟೈನ್ ಸೌಲಭ್ಯದೊಂದಿಗೆ ನಿಗಾ ವಹಿಸುವ ವೈದ್ಯರು, ನರ್ಸ್‍ಗಳು ಮತ್ತು ಅಗತ್ಯ ಔಷಧೋಪಚಾರವನ್ನು ಸಂಪೂರ್ಣವಾಗಿ ಉಚಿತವಾಗಿ ಒದಗಿಸಲಾಗುತ್ತದೆ.
ಇಲ್ಲಿ ದಾಖಲಾಗುವ ರೋಗಿಗಳಿಗೆ ನಾರಾಯಣ ಹೆಲ್ತ್ ಸಿಟಿಯ ವೈದ್ಯರು ಮತ್ತು ನರ್ಸ್‍ಗಳು ಚಿಕಿತ್ಸೆ ನೀಡಲಿದ್ದಾರೆ ಮತ್ತು ನಿರ್ವಹಣೆ ಮಾಡಲಿದ್ದಾರೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಕ್ವಾರಂಟೈನ್ ಸೌಲಭ್ಯ ಮತ್ತು ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಇನ್ಫೋಸಿಸ್ ಫೌಂಡೇಷನ್‍ನ ಪ್ರಯತ್ನಗಳ ವಿಸ್ತರಣೆಯ ಮುಂದುವರಿದ ಭಾಗ ಇದಾಗಿದೆ. ಈ ವಾರದ ಆರಂಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಸರ್ಕಾರದ ಕೋವಿಡ್-19 ಪರಿಹಾರ ಕ್ರಮಗಳಿಗೆ ನೆರವಾಗುವ ನಿಟ್ಟಿನಲ್ಲಿ 100 ಕೋಟಿ ರೂಪಾಯಿಗಳ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದೆ.

ಫೌಂಡೇಷನ್‍ನ ಅಧ್ಯಕ್ಷರಾದ ಸುಧಾಮೂರ್ತಿ
ಇನ್ಫೋಸಿಸ್ ಫೌಂಡೇಷನ್‍ನ ಅಧ್ಯಕ್ಷರಾದ ಸುಧಾಮೂರ್ತಿ ಅವರು ಮಾತನಾಡಿ, ''ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದುರ್ಬಲ ವರ್ಗದವರನ್ನು ತೀವ್ರ ರೀತಿಯಲ್ಲಿ ಸಂಕಷ್ಟಕ್ಕೀಡು ಮಾಡುತ್ತವೆ. ಇದರಿಂದ ಅವರು ತಮ್ಮ ಜೀವನೋಪಾಯವನ್ನೇ ಕಳೆದುಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸಮಾಜದ ದುರ್ಬಲ ವರ್ಗದವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಗಳೊಂದಿಗೆ ಸ್ವಚ್ಛ, ನೈರ್ಮಲ್ಯವಾದ ವಸತಿ ಸೌಲಭ್ಯವನ್ನು ನೀಡುವ ಒಂದು ಸಣ್ಣ ಪ್ರಯತ್ನವನ್ನು ಫೌಂಡೇಷನ್ ಮಾಡುತ್ತಿದೆ. ನಮ್ಮ ಈ ಪ್ರಯತ್ನಕ್ಕೆ ಸಹಕಾರ ನೀಡುತ್ತಿರುವ ನಾರಾಯಣ ಹೆಲ್ತ್ ಸಿಟಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ'' ಎಂದು ತಿಳಿಸಿದರು.

ನಾರಾಯಣ ಹೆಲ್ತ್ ನ ಅಧ್ಯಕ್ಷ ಡಾ.ದೇವಿ ಶೆಟ್ಟಿ
ನಾರಾಯಣ ಹೆಲ್ತ್ ನ ಅಧ್ಯಕ್ಷ ಮತ್ತು ಕಾರ್ಯಕಾರಿ ನಿರ್ದೇಶಕ ಡಾ.ದೇವಿ ಶೆಟ್ಟಿ ಅವರು ಮಾತನಾಡಿ, ''ನಾವು ಇನ್ಫೋಸಿಸ್ ಫೌಂಡೇಷನ್ ಜತೆಗೂಡಿ ಸಮಾಜದ ಹಿಂದುಳಿದ ವರ್ಗದ ರೋಗಿಗಳಿಗೆ 100 ಕೊಠಡಿಗಳ ಕ್ವಾರಂಟೈನ್ ಸೌಲಭ್ಯವನ್ನು ಕಲ್ಪಿಸಲು ಸಂತಸವಾಗುತ್ತಿದೆ. ಸೂಕ್ತ ವೈದ್ಯಕೀಯ ಆರೈಕೆಯೊಂದಿಗೆ ರೋಗಿಗಳು ಸ್ವಯಂ ಗುಣಮುಖರಾಗಲು ಈ ಸೌಲಭ್ಯ ನೆರವಾಗುತ್ತದೆ. ಕೋವಿಡ್-19 ವಿರುದ್ಧ ಭಾರತ ನಡೆಸುತ್ತಿರುವ ಹೋರಾಟದಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಈ ಉಪಕ್ರಮವನ್ನು ಕೈಗೊಂಡಿರುವ ಇನ್ಫೋಸಿಸ್ ಫೌಂಡೇಷನ್‍ಗೆ ನಾವು ಧನ್ಯವಾದಗಳನ್ನು ಹೇಳುತ್ತಿದ್ದೇವೆ'' ಎಂದು ತಿಳಿಸಿದರು.

ಆಸತ್ರೆಗಳ ನೆರವು ಮುಂದುವರೆಸಿದ ಇನ್ಫೋಸಿಸ್
ಕಳೆದ ಎರಡು ವಾರಗಳ ಹಿಂದೆ ಇನ್ಫೋಸಿಸ್ ಬೆಂಗಳೂರಿನಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆಗೆ ನೆರವನ್ನು ಘೋಷಣೆ ಮಾಡಿತ್ತು. ಇದಲ್ಲದೇ, ದೇಶದ ಹಲವಾರು ಮಿಲಿಟರಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಮತ್ತು ಪಿಪಿಇ ಸಲಕರಣೆಗಳನ್ನು ಒದಗಿಸುವುದಾಗಿ ಪ್ರಕಟಿಸಿದೆ. ಇದಲ್ಲದೇ, ಫೌಂಡೇಷನ್ ಅಗತ್ಯವಿರುವ ಸಾವಿರಾರು ಜನರಿಗೆ ಆಹಾರ ಮತ್ತು ನೈರ್ಮಲ್ಯ ಕಿಟ್‌ಗಳನ್ನು ಪೂರೈಕೆ ಮಾಡಲು ಹಲವಾರು ಎನ್‌ಜಿಒಗಳಿಗೆ ನೆರವು ನೀಡುತ್ತಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ ನೆರವು
ಜಾಗತಿಕ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡುತ್ತಿರುವ ಸರ್ಕಾರಗಳು, ಲಾಭರಹಿತ ಸಂಸ್ಥೆಗಳು, ಆರೋಗ್ಯರಕ್ಷಣೆ ಸಂಸ್ಥೆಗಳ ಜತೆಗೆ ಕೈಜೋಡಿಸುವುದನ್ನು ಮುಂದುವರಿಸುತ್ತಿದೆ. ಅಗತ್ಯವಿರುವ ಎಲ್ಲರಿಗೂ ಪರಿಹಾರ ಸಾಮಗ್ರಿಗಳು ತಲುಪುವಂತೆ ಮಾಡುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ. ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದಂತಹ ರೋಗಿಗೆ, ನಮ್ಮ ಆರೋಗ್ಯರಕ್ಷಣೆ ಸಿಬ್ಬಂದಿ ಅಥವಾ ಗಂಭೀರವಾಗಿ ಸಂಕಷ್ಟಕ್ಕೆ ಸಿಲುಕಿರುವ ದಿನಗೂಲಿ ಕಾರ್ಮಿಕರಿಗೆ ನೆರವಾಗುತ್ತಿದ್ದೇವೆ ಎಂದು ಸುಧಾಮೂರ್ತಿ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications