ಹೆರಿಗೆಗೆ ಬಂದಿದ್ದ ಮಹಿಳೆಗೆ ಕೊರೊನಾ; ಬೆಂಗಳೂರಿನ ಆಸ್ಪತ್ರೆಗೆ ಬೀಗ

ಬೆಂಗಳೂರು, ಏಪ್ರಿಲ್ 16 : ಬೆಂಗಳೂರು ನಗರದಲ್ಲಿ ಮತ್ತೊಂದು ಆಸ್ಪತ್ರೆಯನ್ನು ಮುಚ್ಚುವಂತೆ ಬಿಬಿಎಂಪಿ ಸೂಚನೆ ನೀಡಿದೆ. ಆಸ್ಪತ್ರೆಗೆ ಹೆರಿಗೆಗಾಗಿ ಬಂದಿದ್ದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಕುರುಬರಹಳ್ಳಿ ಸಮೀಪದ ಲೋಟಸ್ ಆಸ್ಪತ್ರೆಯನ್ನು 6 ದಿನಗಳ ಕಾಲ ಮುಚ್ಚುವಂತೆ ಬಿಬಿಎಂಪಿ ನಿರ್ದೇಶನ ನೀಡಿದೆ. ಆಸ್ಪತ್ರೆಯ ವೈದ್ಯರು, ನರ್ಸ್‌, ರೋಗಿಗಳಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ.

ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಬಳಿಕ ಮಹಿಳೆ ಪತಿಗೂ ಕೊರೊನಾ ಸೋಂಕು ಇತ್ತು ಎಂಬ ವಿಚಾರ ಹೇಳಿದ್ದರು. ಬಾಣಂತಿಗೂ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು.

COVID 19 Lotus Hospital Kurubarahalli To Close For 6 Days

ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ತಾಯಿ ಮತ್ತು ಮಗುವನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಬೀಗ ಹಾಕಲಾಗಿದ್ದು, ಸ್ವಚ್ಛತೆ ಕಾರ್ಯವನ್ನು ಕೈಗೊಳ್ಳಲಾಗಿದೆ.

ಬುಧವಾರ ಬಿಬಿಎಂಪಿ ವಿಲ್ಸನ್ ಗಾರ್ಡನ್‌ನಲ್ಲಿನ ಅಗಡಿ ಆಸ್ಪತ್ರೆಯನ್ನು 5 ದಿನಗಳ ಕಾಲ ಮುಚ್ಚಲು ಆದೇಶ ನೀಡಿತ್ತು. ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು.

ವೈದ್ಯರಿಗೆ ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಬಿಬಿಎಂಪಿ ಕ್ವೀನ್ಸ್ ರಸ್ತೆಯ ಷಿಫಾ ಆಸ್ಪತ್ರೆಯನ್ನು ಬಂದ್ ಮಾಡಲು ಸೂಚನೆ ನೀಡಿತ್ತು. ಈಗ ಬೆಂಗಳೂರು ನಗರದಲ್ಲಿ ಒಟ್ಟು 3 ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ.

ಕರ್ನಾಟಕದಲ್ಲಿ ಗುರುವಾರ ಮಧ್ಯಾಹ್ನದ ತನಕ 313 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿಯೇ 87 ಪ್ರಕರಣಗಳು ದಾಖಲಾಗಿವೆ. ರಾಜ್ಯದ 8 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಘೋಷಣೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+