ವಿಧಾನಸೌಧ, ವಿಕಾಸಸೌಧದಲ್ಲಿ ಸಾರ್ವಜನಿಕರ ಭೇಟಿಗೆ ನಿರ್ಬಂಧ
ಬೆಂಗಳೂರು, ಜೂನ್ 24:ಸಚಿವಾಲಯ ಕಟ್ಟಡಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ನಲ್ಲಿ ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ.
ನಗರದಲ್ಲಿ ಕೊರೊನಾ ಸೋಂಕು ತಾರಕಕ್ಕೇರಿದೆ, ಹಾಗೆಯೇ ಸಚಿವಾಲಯ ಕಟ್ಟಡಗಳಲ್ಲಿಯೂ ಸೋಂಕು ಹೆಚ್ಚುತ್ತಿರುವ ಕಾರಣ ಮಧ್ಯಾಹ್ನ 3.30ರೊಳಗೆ ಯಾರೂ ಕೂಡ ವಿಧಾನ ಸೌಧ, ವಿಕಾಸಸೌಧ ಅಥವಾ ಎಂಎಸ್ ಬಿಲ್ಡಿಂಗ್ಗೆ ಭೇಟಿ ನೀಡುವಂತಿಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಸಚಿವಾಲಯದ ಕಟ್ಟಡಗಳಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ.

ಆದ ಕಾರಣ ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು, ಸಂದರ್ಶಿಸಲು ನಿರ್ದಿಷ್ಟ ಉದ್ದೇಶವನ್ನು ಹೊಂದಿರುವ ಸಾರ್ವಜನಿಕರನ್ನು ಮಾತ್ರ ಪರಿಶೀಲಿಸಿ ಮಧ್ಯಾಹ್ನ 3.30ರ ನಂತರ ಪ್ರವೇಶಿಸಲು ಅವಕಾಶ ಕಲ್ಪಿಸಿದೆ.
ಯಾವುದೇ ಕಾರಣ್ಕಕೂ ಮಧ್ಯಾಹ್ನ 3.30ರ ಮೊದಲು ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ. ಈ ಕುರಿತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ತಿಳಿಸಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್












Click it and Unblock the Notifications