ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಕೋವಿಡ್-19 ಹೆಚ್ಚಳ; ಬಿಬಿಎಂಪಿಯಿಂದ ಪರಿಷ್ಕೃತ ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ಜೂನ್ 28: ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿರುವ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಒಂದು ದಿನದಲ್ಲಿ 887 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Breaking: ಕರ್ನಾಟಕದಲ್ಲಿ ಒಂದೇ ದಿನ 968 ಮಂದಿಗೆ ಕೊರೊನಾ ವೈರಸ್!Breaking: ಕರ್ನಾಟಕದಲ್ಲಿ ಒಂದೇ ದಿನ 968 ಮಂದಿಗೆ ಕೊರೊನಾ ವೈರಸ್!

ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾ ಸಂಸ್ಥೆ, ಕಾಲೇಜುಗಳು, ಅಪಾರ್ಟ್ ಮೆಂಟ್ ಗಳಲ್ಲಿ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಹಾಗೂ ಕ್ವಾರೆಂಟೇನ್ ವ್ಯವಸ್ಥೆಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

COVID-19: Revised Guidelines Issued for Rwas, Offices, and Educational Institutions in Bengaluru

ಬಿಬಿಎಂಪಿ ಹೊರಡಿಸಿದ ಮಾರ್ಗಸೂಚಿಯಲ್ಲಿ ಏನಿದೆ?:
ಅಪಾರ್ಟ್ ಮೆಂಟ್ ಮಾರ್ಗಸೂಚಿ:
*
ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗಿ ವರದಿಯಾದ ವಸತಿ ಸಮುಚ್ಛಯ, ಅಪಾರ್ಟ್ ಮೆಂಟ್ ಅನ್ನು ಕ್ಲಸ್ಟರ್ ಎಂದು ಪರಿಗಣಿಸಲಾಗುವುದು. 1 ರಿಂದ 5 ಪ್ರಕರಣ ಪತ್ತೆಯಾದರೆ ಸಣ್ಣ ಕ್ಲಸ್ಟರ್, 5 ಕ್ಕಿಂತ ಹೆಚ್ಚು ವರದಿಯಾದರೆ ದೊಡ್ಡ ಕ್ಲಸ್ಟರ್ ಹಾಗೂ 15ಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದರೆ ಇಡೀ ಕಾಂಪ್ಲೆಕ್ಸ್ ಅಥವಾ ಅಪಾರ್ಟ್ ಮೆಂಟ್ ನಿವಾಸಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸುವುದು.
* ರಾಪಿಡ್ ಆಂಟಿಜೆನಿಕ್ ಟೆಸ್ಟ್ ಸಂದರ್ಭದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ, RT-PCR ಪರೀಕ್ಷೆಗೆ ಮಾದರಿಯನ್ನು ಸಂಗ್ರಹಿಸುವುದು.
* ಕೋವಿಡ್-19 ಸೋಂಕಿನ ಲಕ್ಷಣ ಇಲ್ಲದವರಿಗೆ RT-PCR ಪರೀಕ್ಷೆ ಅಗತ್ಯವಿಲ್ಲ, ಆದರೆ ಈ ನಿಯಮವು ಕೋವಿಡ್-19 ಪ್ರಾಥಮಿಕ ಸಂಪರ್ಕಿತರಿಗೆ ಅನ್ವಯ ಆಗುವುದಿಲ್ಲ
* ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್-19 ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ

ಶಾಲಾ-ಕಾಲೇಜು ಕಚೇರಿಗಳಲ್ಲಿ ಮಾರ್ಗಸೂಚಿ:
*ವಿದ್ಯಾಸಂಸ್ಥೆಗಳು, ಕಚೇರಿಗಳು ಮತ್ತು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುವವರು ಸಹ ಕೋವಿಡ್-19 ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಸೋಂಕಿನ ಲಕ್ಷಣಗಳನ್ನು ಹೊಂದಿರುವವರು ಕಚೇರಿಗೆ ಆಗಮಿಸದಂತೆ ಸೂಚನೆ ನೀಡುವುದು. ಪಾಸಿಟಿವ್ ವರದಿ ಬಂದಲ್ಲಿ ಐಸೋಲೇಷನ್ ನಲ್ಲಿ ಇರಿಸುವುದು. ದೈಹಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಸಾಮೂಹಿಕ ಕೋವಿಡ್-19 ಪರೀಕ್ಷೆಗೆ ಶಿಫಾರಸ್ಸು ಮಾಡುವಂತಿಲ್ಲ.

ಶಾಲೆಗಳಲ್ಲಿ ಹೇಗಿರಬೇಕು ಮಾರ್ಗಸೂಚಿ:
* 12ನೇ ತರಗತಿವರೆಗಿನ ಶಾಲೆಗಳಲ್ಲಿ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು ಶಾಲೆಗೆ ಹಾಜರಾಗದಂತೆ ಸೂಚನೆ ನೀಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು, ಥರ್ಮಲ್ ಸ್ಕ್ರೀನಿಂಗ್ ಬಳಸುವುದು, ಜ್ವರ, ನೆಗಡಿ ಮತ್ತು ಕೆಮ್ಮು ಉಳ್ಳವರು ಸೂಕ್ತ ಚಿಕಿತ್ಸೆಗೆ ಒಳಗಾಗುವಂತೆ ಸೂಚನೆ ನೀಡುವುದು.

ಕರ್ನಾಟಕದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ:

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಪಾಸಿಟಿವಿಟಿ ದರ 5.44ಕ್ಕೆ ಏರಿಕೆಯಾಗಿದ್ದು, ಕಳೆದೊಂದು ವಾರದಲ್ಲಿನ ಪಾಸಿಟಿವಿಟಿ ದರವು ಶೇ.3.69ರಷ್ಟಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 968 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಒಬ್ಬರು ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 337 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3966420 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3921387 ಸೋಂಕಿತರು ಗುಣಮುಖರಾಗಿದ್ದು, 40,073 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 4918 ಸಕ್ರಿಯ ಪ್ರಕರಣಗಳಿವೆ.

English summary
COVID-19: Revised guidelines issued for RWAs, offices, and educational institutions in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X