ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಕೊರೊನಾ ನಿಯಮ ಉಲ್ಲಂಘನೆ, 2.64 ಲಕ್ಷ ದಂಡ ವಸೂಲಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 9: ಕೊರೊನಾ ನಿಯಮ ಉಲ್ಲಂಘಿಸುವವರ ವಿರುದ್ಧ ಪೂರ್ವ ವಿಭಾಗದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 2.64 ಲಕ್ಷ ದಂಡ ವಸೂಲು ಮಾಡಲಾಗಿದೆ.

ಕಳೆದ 48 ಗಂಟೆಗಳಲ್ಲಿ ಒಟ್ಟು 1058 ದಂಡ ವಸೂಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ವಾಣಿಜ್ಯ ಮಳಿಗೆಗಳು, ಹೋಟೆಲ್‍ಗಳು, ಕಾಫಿ ಶಾಫ್‍ಗಳು, ಮಾಲ್‍ಗಳು, ರೆಸ್ಟೋರೆಂಟ್‍ಗಳು, ಇತರೆ ಅಂಗಡಿಗಳಿಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸದೇ ಇದ್ದ ಒಟ್ಟು 26 ವಿವಿಧ ವಾಣಿಜ್ಯ ಮಳಿಗೆಗಳನ್ನು ಮುಚ್ಚಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ಏ.11ರಿಂದ 14ವರೆಗೆ ಲಸಿಕೆ ಉತ್ಸವ: ತೇಜಸ್ವಿ ಸೂರ್ಯಬೆಂಗಳೂರು ದಕ್ಷಿಣದಲ್ಲಿ ಏ.11ರಿಂದ 14ವರೆಗೆ ಲಸಿಕೆ ಉತ್ಸವ: ತೇಜಸ್ವಿ ಸೂರ್ಯ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವ ಮತ್ತು ಸಾಮಾಜಿಕ ಅಂತರ ಕಾಡಿಕೊಳ್ಳದಿರುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Bengaluru: Covid 19 Rules Violation, 2.64 Lakh Fine Collected

ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಎರಡನೇ ಅಲೆ ತ್ರೀವವಾಗಿ ಹರಡುತ್ತಿರುವುದರಿಂದ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ ಹಿನ್ನಲೆಯಲ್ಲಿ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಕಡ್ಡಾಯವಾಗಿ ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಉಚಿತ ಮಾಸ್ಕ್ ಗಳನ್ನು ವಿತರಿಸಿದ್ದಾರೆ.

Recommended Video

ಕಳೆದ 24 ಗಂಟೆಗಳಲ್ಲಿ 1,45,384 ಕೊರೊನಾ ಪ್ರಕರಣ ಪತ್ತೆ-794 ಜನರು ಸೋಂಕಿಗೆ ಬಲಿ | Oneindia Kannada

English summary
Bengaluru police And BBMP joint operation on Covid 19 Rules Violation, 2.64 Lakh Fine Collected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X