ಹೈಕೋರ್ಟ್‌: ಯುವ ಕಾಂಗ್ರೆಸ್ ಮುಖಂಡ ನಲಪಾಡ್‌ಗೆ ಬಿಗ್ ರಿಲೀಫ್‌

ಬೆಂಗಳೂರು, ಫೆಬ್ರವರಿ 24: ಕೋವಿಡ್‌ ನಿಯಮ ಉಲ್ಲಂಘಿಸಿದ ಪ್ರಕರಣ ಸಂಬಂಧ ಯುವ ಕಾಂಗ್ರೆಸ್ ಮುಖಂಡ ಹ್ಯಾರಿಸ್‌ ನಲಪಾಡ್‌ಗೆ ದೊಡ್ಡ ರಿಲೀಫ್ ಸಿಕ್ಕಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣ ಆರೋಪದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಹಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ನಗರದ ಕ್ವೀನ್ಸ್ ರಸ್ತೆಯಿಂದ ರಾಜಭವನದ ವರೆಗೂ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

Covid 19 Rules Violation: Big Relief For Mohammed Haris Nalapad

ಹಾಗಾಗಿ ನಲಪಾಡ್ ವಿಚಾರಣೆ ಎದುರಿಸಬೇಕಾಗಿಲ್ಲ. ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯಲ್ಲಿ ದಾಖಲಾಗಿದ್ದ ಖಾಸಗಿ ದೂರು ಮತ್ತು ಆದರ ಸಂಬಂಧ ನಡೆಯುತ್ತಿದ್ದ ವಿಚಾರಣೆ ರದ್ದುಕೋರಿ ನಲಪಾಡ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ಪುರಸ್ಕರಿಸಿದ್ದು, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಅರ್ಜಿದಾರ ಪರ ವಕೀಲರು, ಇದೇ ಆರೋಪ ಸಂಬಂಧಿಸಿದಂತೆ ಮೊದಲ ಆರೋಪಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ. ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು.

ಅರ್ಜಿದಾರರ ಪರ ವಕೀಲರು, ಪ್ರತಿಭಟನೆ ನಡೆದಿರುವ ಸಂಬಂಧ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ, ಇದೇ ಪ್ರಕರಣ ಸಂಬಂಧ ಐಪಿಸಿ 188ರ (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಮತ್ತು ಪೊಲೀಸ್ ಕಾಯಿದೆಯ 103 ಅಡಿಯಲ್ಲಿ ಎಫ್ಐಆರ್ ದಾಖಾಲಗಿದೆ. ಐಪಿಸಿ ಸೆಕ್ಷನ್ 188ರ ಉಲ್ಲಂಘನೆಯಾಗಬೇಕು ಎಂದರೆ ಜಿಲ್ಲಾಧಿಕಾರಿಗಳ ಹಂತದ ಅಧಿಕಾರಿ ಆದೇಶ ಉಲ್ಲಂಘನೆ ಮಾಡಿರಬೇಕು ಎಂಬ ನಿಯಮವಿದೆ. ಆದರೆ, ವಿಚಾರಣಾ ನ್ಯಾಯಾಲಯ ಈ ಎಲ್ಲ ಅಂಶಗಳನ್ನು ಗಮನಿಸಿದೆ ಕಾಗ್ನಿಜೆನ್ಸ್ ಪಡೆದುಕೊಂಡಿದೆ. ಆದ್ದರಿಂದ ಪ್ರಕರಣ ರದ್ದುಮಾಡಬೇಕು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ ಏನು..?

ಎಐಸಿಸಿ ಮಾಜಿ ಅಧ್ಯಕ್ಷರುಗಳಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಿದ್ದನ್ನು ಖಂಡಿಸಿ ಅರ್ಜಿದಾರರು ಸೇರಿದಂತೆ 800ಕ್ಕೂ ಹೆಚ್ಚು ಕಾರ್ಯಕರ್ತರು ಕ್ವೀನ್ಸ್ ರಸ್ತೆಯಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಇದರಿಂದಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿ ಶಿವಾಜಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟ್ರರ್ ಅವರು ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ, ಈ ಸಂಬಂಧ ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡು ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿತ್ತು. ತನಿಖೆ ನಡೆಸಿದ್ದ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+