ಕರ್ನಾಟಕ - ಬೆಂಗಳೂರಿನಲ್ಲಿ ಮತ್ತೆ Covid 19 ಆತಂಕ: ನಗರದಲ್ಲಿ 32 ಸಕ್ರಿಯ ಪ್ರಕರಣ, ದಕ್ಷಿಣ ಭಾರತದಲ್ಲಿ ಹೈ ಅಲರ್ಟ್
Covid 19: ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೋವಿಡ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ವಿಶ್ವದಾದ್ಯಂತ ಭಾರೀ ಆತಂಕಕ್ಕೆ ಕಾರಣವಾಗಿದ್ದ ಕೋವಿಡ್ (Covid 19) ಮತ್ತೆ ಕರ್ನಾಟಕದಲ್ಲಿ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಕರ್ನಾಟಕವೂ ಸೇರಿದಂತೆ ವಿಶ್ವದಾದ್ಯಂತ ಭಾರೀ ಆತಂಕಕ್ಕೆ ಕಾರಣವಾಗಿದ್ದ ಕೋವಿಡ್ ಇದೀಗ ಮತ್ತೆ ಬೆಂಗಳೂರಿನಲ್ಲಿ ಸದ್ದು ಮಾಡುತ್ತಿದೆ. ಕೋವಿಡ್ ಕಾಲದಲ್ಲಿ ಜನ ಮಾನಸಿಕ, ದೈಹಿಕ ಹಾಗೂ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ಇದೀಗ ಬೆಂಗಳೂರಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ. ನಾಲ್ಕು ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ನಲುಗಿಸಿದ್ದ ಹಾಗೂ ಲಕ್ಷಾಂತರ ಜನರ ಸಾವಿಗೆ ಕಾರಣವಾಗಿದ್ದ ಕೋವಿಡ್ ಮಹಾಮಾರಿ ಮತ್ತೆ ವಕ್ಕರಿಸಿದೆ. ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ಇದರ ಬೆನ್ನಲ್ಲೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಬೆಂಗಳೂರಿನಲ್ಲೂ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅದೂ ಸಹ ಬರೋಬ್ಬರಿ 32 ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ತೀವ್ರ ನಿಗಾ ವಹಿಸುವಂತೆ ನಿರ್ದೇಶನ ನೀಡಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಆರೋಗ್ಯ ಇಲಾಖೆಯು ಬಿಡುಗಡೆ ಮಾಡಿರುವ ಅಂಕಿ-ಅಂಶಗಳು ಇದೀಗ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಜೂನ್ ತಿಂಗಳಿನಲ್ಲಿ ಕರ್ನಾಟಕದಲ್ಲಿ 14 ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ಇದೀಗ ಜುಲೈ 15ರ ವೇಳೆಗೆ ಬೆಂಗಳೂರಿನಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯು ಏಕಾಏಕಿ 32ಕ್ಕೆ ಏರಿಕೆಯಾಗಿದೆ. ಕೋವಿಡ್ ಲಕ್ಷಣಗಳಿರುವ ಅಥವಾ ಕೋವಿಡ್ ಸೋಂಕಿನ ಶಂಕೆ ಇರುವ 193 ಜನ ಶಂಕಿತರನ್ನು ಆರೋಗ್ಯ ಇಲಾಖೆಯು ತಪಾಸಣೆಗೆ ಒಳಪಡಿಸಿತ್ತು. ಇವರಲ್ಲಿ 32 ಜನರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.

ದಕ್ಷಿಣ ಭಾರತದಲ್ಲಿ ಹೆಚ್ಚಾಯ್ತು ಕೋವಿಡ್ ಪ್ರಕರಣ
ಇನ್ನು ದಕ್ಷಿಣ ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಭಾರಿ ಹವಾಮಾನದಲ್ಲಿ ಭಾರೀ ಬದಲಾವಣೆಯೂ ಸಹ ಕೋವಿಡ್ ಸೋಂಕು ಉಲ್ಬಣಿಸುವುದಕ್ಕೆ ಕಾರಣ ಎಂದು ಹೇಳಲಾಗಿದೆ. ಆಂಧ್ರಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಆಂಧ್ರದಲ್ಲಿ ಈಗ 8 ಸಕ್ರಿಯ ಪ್ರಕರಣಗಳಿದ್ದರೂ, ಈಗಾಗಲೇ ಕೋವಿಡ್ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಹೀಗಾಗಿ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರಪ್ರದೇಶ ಹಾಗೂ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ತುಮಕೂರಿನ ಪಾವಗಡಲ್ಲಿ ಚೆಕ್‌ಪೋಸ್ಟ್‌ಗಳ ನಿರ್ಮಾಣ ಮಾಡಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಕರ್ನಾಟಕ ಸರ್ಕಾರವು ಕೋವಿಡ್‌ಗೆ ಸಂಬಂಧಿಸಿದಂತೆ ಈ ಹಿಂದಿನಂತೆ ಯಾವುದೇ ಕಠಿಣ ಮಾರ್ಗಸೂಚಿಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಕೋವಿಡ್ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಹೀಗಾಗಿ, ಆ ಆತಂಕ ಜನರಲ್ಲಿ ಇನ್ನೂ ಮನೆ ಮಾಡಿದೆ.












Click it and Unblock the Notifications