ಕೋವಿಡ್ ಭಯ; ಐಐಎಸ್ಸಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು, ಆಗಸ್ಟ್ 19 : ಕೋವಿಡ್-19 ಸೋಂಕಿನ ಭೀತಿಯ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಐಐಎಸ್ಸಿಯಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recommended Video
ಮೃತಪಟ್ಟ ವಿದ್ಯಾರ್ಥಿಯನ್ನು ಸಂದೀಪ್ ಕುಮಾರ್ (24) ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢ್ ಮೂಲದ ಸಂದೀಪ್ ಕುಮಾರ್ ಮಂಗಳವಾರ ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂದೀಪ್ ಕುಮಾರ್ ಸ್ನೇಹಿತರೊಬ್ಬರಿಗೆ ಇ-ಮೇಲ್ ಕಳಿಸಿದ್ದಾರೆ. 'ನನಗೆ ಕೊರೊನಾ ಪಾಸಿಟಿವ್ ಇರುವಂತೆ ಕಾಣುತ್ತಿದೆ. ಜೊತೆಗೆ ಭಯವಾಗುತ್ತಿದೆ' ಎಂದು ಬರೆದಿದ್ದಾರೆ. ಪೊಲೀಸರು ಸ್ನೇಹಿತ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಸದಾಶಿವನಗರ ಠಾಣೆ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ವಿದ್ಯಾರ್ಥಿಯ ಕುಟುಂಬ ಸದಸ್ಯರಿಗೆ ಮಾಹಿತಿಯನ್ನು ನೀಡಿದ್ದಾರೆ.
ಐಐಎಸ್ಸಿ ಪ್ರಕಟಣೆ : ವಿದ್ಯಾರ್ಥಿ ಆತ್ಮಹತ್ಯೆ ಬಗ್ಗೆ ಐಐಎಸ್ಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಇದೊಂದು ದುಃಖದ ಸಂಗತಿ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮಾನಸಿಕವಾಗಿ ಸದೃಡವಾಗಿರಬೇಕು. ಇದಕ್ಕಾಗಿ ಅಗತ್ಯ ವೈದ್ಯಕೀಯ ಸಲಹೆ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮಂಗಳವಾರ 2,242 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,106ಕ್ಕೆ ಏರಿಕೆಯಾಗಿದೆ.












Click it and Unblock the Notifications