ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಲಸಿಕೆ ವಿತರಣೆ; ಬಿಬಿಎಂಪಿಯಲ್ಲಿ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ನವೆಂಬರ್ 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಲಸಿಕೆ ಹಂಚಿಕೆ ಮಾಡುವ ಕುರಿತು ಮಹತ್ವದ ಸಭೆ ನಡೆಯಿತು. ಕರ್ನಾಟಕದಲ್ಲಿ ಅತಿ ಹೆಚ್ಚು ಸೋಂಕಿತರು ಇರುವುದು ಬೆಂಗಳೂರು ನಗರದಲ್ಲಿ.

ಬುಧವಾರ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ವಿವಿಧ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿಗೆ ಲಸಿಕೆ ನೀಡಲು ಬಿಬಿಎಂಪಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಿದರು.

ಹುಬ್ಬಳ್ಳಿ; ಎಲ್ಲಾ ಕೋವಿಡ್ ಮಾದರಿ ವರದಿ ನೆಗೆಟಿವ್! ಹುಬ್ಬಳ್ಳಿ; ಎಲ್ಲಾ ಕೋವಿಡ್ ಮಾದರಿ ವರದಿ ನೆಗೆಟಿವ್!

ಟಾಸ್ಕ್ ಫೋರ್ಸ್ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ಬಿ.ಕೆ ವಿಜೇಂದ್ರ ಮತ್ತು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಬೆಂಗಳೂರು; 4 ಸಾವಿರದ ದಾಟಿದ ಕೋವಿಡ್ ಸಾವಿನ ಸಂಖ್ಯೆ ಬೆಂಗಳೂರು; 4 ಸಾವಿರದ ದಾಟಿದ ಕೋವಿಡ್ ಸಾವಿನ ಸಂಖ್ಯೆ

COVID 19 Vaccine Distribution High Level Meeting BBMP

ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಸೋಂಕಿಗೆ ಇನ್ನೂ ಲಸಿಕೆ ಸಿಕ್ಕಿಲ್ಲ. ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ. ವಿವಿಧ ಲಸಿಕೆಗಳ ಪ್ರಯೋಗ 2 ಮತ್ತು 3ನೇ ಹಂತದಲ್ಲಿದೆ. 2021ರಲ್ಲಿ ಲಸಿಕೆ ಸಿಗಬಹುದು ಎಂದು ಅಂದಾಜಿಸಲಾಗಿದೆ.

ಕೊವಿಡ್-19 ಲಸಿಕೆ ಸಂಶೋಧನೆಯಲ್ಲಿ ಭಾರತದ ಸಹಕಾರ ಕೋರಿದ ಚೀನಾ ಕೊವಿಡ್-19 ಲಸಿಕೆ ಸಂಶೋಧನೆಯಲ್ಲಿ ಭಾರತದ ಸಹಕಾರ ಕೋರಿದ ಚೀನಾ

ಕರ್ನಾಟಕದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವುದು ಬೆಂಗಳೂರು ನಗರದಲ್ಲಿ. ಒಟ್ಟು ಸೋಂಕಿತರ ಸಂಖ್ಯೆ 3,58,606. ನವೆಂಬರ್ 17ರಂದು ನಗರದಲ್ಲಿ 729 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

Recommended Video

KL Rahulಗೆ Australiaದಲ್ಲಿ ಸಿಗಲಿದೆ ಚಿನ್ನದಂತಹ ಅವಕಾಶ | Oneindia Kannada

ಬೆಂಗಳೂರು ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 17,707. ಇದುವರೆಗೂ ನಗರದಲ್ಲಿ 3,36,880 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. 4018 ಜನರು ಮೃತಪಟ್ಟಿದ್ದಾರೆ.

English summary
BBMP commissioner N.Manjunath Prasad chaired the high level meeting on November 18, 2020 on the issue of COVID 19 vaccine distribution in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X