ಬೆಂಗಳೂರು; ಸರ್ಕಾರಿ ಕಚೇರಿಯಲ್ಲಿ 30 ಸಿಬ್ಬಂದಿಗೆ ಕೋವಿಡ್ ಸೋಂಕು
ಬೆಂಗಳೂರು, ಅಕ್ಟೋಬರ್ 15: ಬೆಂಗಳೂರಿನಲ್ಲಿರುವ ಜಲಸಂಪನ್ಮೂಲ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ 30 ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಕಚೇರಿಯನ್ನು ಮೂರು ದಿನಗಳ ಕಾಲ ಮುಚ್ಚಲಾಗಿದೆ.
ಗುರುವಾರದಿಂದಲೇ ಮೂರು ದಿನಗಳ ಕಾಲ ಕಚೇರಿಯನ್ನು ಮುಚ್ಚಿ ಆದೇಶ ಹೊರಡಿಸಲಾಗಿದೆ. ನಗರದ ಆನಂದ್ ರಾವ್ ವೃತ್ತದ ಬಳಿ ಮುಖ್ಯ ಇಂಜಿನಿಯರ್ ಕಚೇರಿ ಇದೆ. ಕಚೇರಿ ಮುಚ್ಚಿರುವ ಕುರಿತು ಇಲಾಖೆಗೆ ಮುಖ್ಯ ಇಂಜಿನಿಯರ್ ಪತ್ರವನ್ನು ಬರೆದಿದ್ದಾರೆ.
ಕಚೇರಿಯ 30 ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಒಂದಲ್ಲ ಒಂದು ರೀತಿಯಲ್ಲಿ ಎಲ್ಲಾ ಸಿಬ್ಬಂದಿಗಳು ಸಂಪರ್ಕಕ್ಕೆ ಬಂದಿರುತ್ತಾರೆ. ಆದ್ದರಿಂದ, ಮೂರು ದಿನಗಳ ಕಾಲ ಕಚೇರಿಯನ್ನು ಮುಚ್ಚುವ ತೀರ್ಮಾನ ಕೈಗೊಳ್ಳಲಾಗಿದೆ.

ಮೂರು ದಿನದಲ್ಲಿ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಹಲವ ಅಧಿಕಾರಿಗಳಿಗೆ ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ಕೊಡಲಾಗಿದೆ. ಸಿಬ್ಬಂದಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.
ಮೂರು ತಿಂಗಳಿನಿಂದ ಹಲವು ಬಾರಿ ಸಿಬ್ಬಂದಿಗೆ ಸೋಂಕು ತಗುಲಿದಾಗ ಕಚೇರಿಯನ್ನು ಮುಚ್ಚಲಾಗಿತ್ತು. ಈ ಬಾರಿ 30ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಸೋಂಕು ತಗುಲಿದ್ದು, ಸಂಪೂರ್ಣ ಕಚೇರಿಯನ್ನು ಮುಚ್ಚಲಾಗಿದೆ.
ವಿಕಾಸೌಧದಲ್ಲಿರುವ ಜಲಸಂಪನ್ಮೂಲ ಇಲಾಖೆಯ ಮುಖ್ಯ ಕಚೇರಿಯಲ್ಲಿಯೂ ಕೆಲವು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದ್ದು, ಕಚೇರಿಗೆ ಬೀಗ ಹಾಕಲಾಗಿದೆ.
Recommended Video
ಬುಧವಾರದ ವರದಿಯಂತೆ ಬೆಂಗಳೂರಿನಲ್ಲಿ ಪತ್ತೆಯಾದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 4574. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 293405. ಸಕ್ರಿಯ ಪ್ರಕರಣಗಳ ಸಂಖ್ಯೆ 65045.












Click it and Unblock the Notifications