ಇನ್ಫೋಸಿಸ್ ನೆರವಿನ ಬ್ರಾಡ್ ವೇ ಆಸ್ಪತ್ರೆ ಶೀಘ್ರ ಕಾರ್ಯಾರಂಭ
ಬೆಂಗಳೂರು ಆಗಸ್ಟ್ 3: ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Recommended Video
ಆಸ್ಪತ್ರೆ ನಿರ್ಮಿಸಲು ಇನ್ಫೋಸಿಸ್ ಪ್ರತಿಷ್ಠಾನ ನೆರವು ನೀಡಿದೆ. ಪ್ರತಿಷ್ಠಾನಕ್ಕೆ ಮತ್ತು ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಸರ್ಕಾರ ಮತ್ತು ಜನರ ಪರವಾಗಿ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.
ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)#InfosysFoundation pic.twitter.com/fBM68GNq7y
— Dr Sudhakar K (@mla_sudhakar) August 2, 2020
ಬ್ರಾಡ್ ವೇ ರಸ್ತೆಯ ಬಳಿ ಬಿಬಿಎಂಪಿ ಕಟ್ಟಡದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೊರೊನಾ ರೋಗಿಗಳಿಗಾಗಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಜತೆಗೆ ಸಿಬ್ಬಂದಿ ನಿಯೋಜನೆಯೂ ಮಾಡಲಾಗಿದೆ.
ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಆತ್ಯಂತ ಶ್ಲಾಘನೀಯ.
— Dr Sudhakar K (@mla_sudhakar) August 2, 2020
"ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಸಿದ್ಧವಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇನ್ನು ಎರಡು ವಾರದೊಳಗೆ ಕಾರ್ಯಾರಂಭಗೊಳ್ಳಲಿದೆ" ಎಂದು ಸಚಿವರು ಹೇಳಿದ್ದಾರೆ.

ವೈದ್ಯರಿಗೆ ಧನ್ಯವಾದ: ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ಆಸ್ಪತ್ರೆ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ಶ್ಲಾಘಿಸಿದ್ದಾರೆ.
"ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ವೈದ್ಯರು ಮಾನವೀಯತೆ ಮೆರೆದಿದ್ದಾರೆ. ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಶ್ಲಾಘನೀಯವಾದುದು" ಎಂದು ಅವರು ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications