ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಹೆಚ್ಚಳ: ಶೀಘ್ರದಲ್ಲೇ ಬಿ ಸಿ ನಾಗೇಶ್ ಭೇಟಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 6: ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ನಾಳೆ ಅಥವಾ ನಾಡಿದ್ದು ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವುದಾಗಿ ಅವರು ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಕೆಲವು ಶಾಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡು ಬಂದಿದೆ. ಇದು ಕಳವಳಕಾರಿ ವಿಚಾರ. ಆದರೆ 1-10 ಸರ್ಕಾರಿ ಶಾಲೆಗಳಲ್ಲಿ ಸೋಂಕು ಕಂಡುಬಂದಿಲ್ಲ. ಅನೇಕ ಡಿಸಿಗಳೊಂದಿಗೆ ನಾನು ಮಾತನಾಡಿದ್ದೇನೆ. ಚಿಕ್ಕಮಗಳೂರು ಡಿಸಿ ಖುದ್ದಾಗಿ ಭೇಟಿ ನೀಡಿದ್ದಾರೆ. ಎಲ್ಲಾ ಮಕ್ಕಳಿಗೂ ನೋಡಿಕೊಳ್ಳಲು ಬೇಕಾದ ವ್ಯವಸ್ಥೆಯನ್ನು ಮಾಡಿದ್ದಾರೆ. ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆ. ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ, ನವೋದಯ ಶಾಲೆಗಳಲ್ಲಿ ಕಟ್ಟುನಿಟ್ಟಿನ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳಿಗೆ ತೊಂದರೆ ಆಗಿಲ್ಲ. ಸೋಂಕಿತ ಮಕ್ಕಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ" ಎಂದರು.

"ಮಕ್ಕಳಿಗೆ ತೊಂದರೆ ಆಗಿಲ್ಲ. ಸೋಂಕಿತ ಮಕ್ಕಳಿಗೆ ಚಿಕಿತ್ಸೆ ಕೊಡಲಾಗಿದೆ. ಕೆಲವೆಡೆ ಶಿಕ್ಷಕರಿಗೆ ಸೋಂಕು ಕಂಡುಬಂದಿದೆ. ಯಾವುದೇ ಸಮಸ್ಯೆ, ಆತಂಕ ಇಲ್ಲ. ಇವತ್ತು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಇರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ. ನೀತಿ ಸಂಹಿತೆ ಮುಗಿದ ಬಳಿಕ ಭೇಟಿ ನಾನು ನಾಳೆ, ನಾಡಿದ್ದು, ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡ್ತೇನೆ. ಜೊತೆಗೆ ವಸತಿ ಶಾಲೆಗಳಲ್ಲಿ ಎಸ್.ಓ.ಪಿ ಪಾಲನೆ ಆಗ್ತಿದೆಯಾ ಇಲ್ಲವಾ ಸ್ಚತಃ ಡಿಸಿಗಳೇ ಚೆಕ್ ಮಾಡೋದಕ್ಕೆ ಹೇಳಿದ್ದೇನೆ" ಎಂದರು.

Covid increase in school and college: B C Nagesh visit soon

ತಜ್ಞರಿಂದ ಪ್ರತಿದಿನವೂ ವರದಿ ಪಡೆದುಕೊಳ್ಳುತ್ತಿದ್ದೇವೆ. ವರದಿ ಪ್ರಕಾರ ತಕ್ಷಣಕ್ಕೆ ಯಾವುದೇ ಆತಂಕ ಬೇಡ ಅಂತಲೇ ಹೇಳುತ್ತಿದ್ದಾರೆ. ಅಕಸ್ಮಾತ್ ತೀವ್ರ ಹೆಚ್ಚಳ ಕಂಡು ಬಂದರೆ ಶಾಲೆಗಳನ್ನು ಕ್ಲೋಸ್ ಮಾಡೋದಕ್ಕೂ ಕೂಡ ನಾವು ಸಿದ್ದರಿದ್ದೇವೆ. ಯಾವುದೇ ರೀತಿಯ ಆತಂಕ ಪೋಷಕರಿಗೆ ಬೇಡ. ಇವತ್ತು ಅಧಿಕಾರಿಗಳ ಜೊತೆ ಸಭೆ ಮಾಡಿ ಎಸ್‌.ಓ.ಪಿ ಮತ್ತಷ್ಟು ಕಠಿಣ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇವೆ.

ಪರೀಕ್ಷೆಗಳಲ್ಲಿಯೇ ಹೆಚ್ಚು ಸಾಮಾಜಿಕ ಅಂತರ ನಿಯಮಗಳ ಪಾಲನೆ‌ ಆಗುತ್ತದೆ. ಫೆಬ್ರವರಿ ಅಂತ್ಯದ ವೇಳೆಗೆ ಸ್ವಲ್ಪ ಕೋವಿಡ್ ಹೆಚ್ಚಾಗಬಹುದು. ಆದರೆ ಆ ವೇಳೆಗೆ ಮಕ್ಕಳಿಗೇ ಲಸಿಕೆ ಬರುವ ಸಾಧ್ಯತೆ ನಿರೀಕ್ಷೆ ಹೆಚ್ಚಿದೆ. ಹೀಗಾಗಿ ಪ್ರತಿ ಕ್ಷಣವೂ ಸರ್ಕಾರ ವಾಚ್ ಮಾಡ್ತಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದರು.

ಬೆಂಗಳೂರಿನಲ್ಲಿ 10 ದಿನದಲ್ಲಿ 286 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 19 ವರ್ಷದೊಳಗಿನ 286 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ 9 ವರ್ಷದೊಳಗಿನ 85 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ನವೆಂಬರ್ ತಿಂಗಳಲ್ಲಿ 160 ರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ, ಡಿಸೆಂಬರ್ 1ರಂದು 165ಕ್ಕೆ ಏರಿದೆ. ಇನ್ನು ಡಿಸೆಂಬರ್ 2ಕ್ಕೆ 206, ಡಿಸೆಂಬರ್ 3 ರಂದು 212, ಡಿಸೆಂಬರ್ 4 ರಂದು 207 ಸೋಂಕಿತರ ಸಂಖ್ಯೆ ಕಂಡುಬಂದಿದೆ. ನಿನ್ನೆ ಕೂಡಾ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದೆ.

ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕೊವಿಡ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಶೀಘ್ರದಲ್ಲೇ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಕಳೆದ ವಾರ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದೆ. ಸಭೆ ಸಮಾರಂಭಗಳಿಗೆ ಜನರ ಮಿತಿ ನಿಗದಿ ಮಾಡುವುದು ಮತ್ತು 2 ಡೋಸ್ ಲಸಿಕೆ ಕಡ್ಡಾಯ ಮಾಡಲು ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು.

ಸದ್ಯ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮತ್ತೆ ಪ್ರಸ್ತಾವನೆ ಸಲ್ಲಿಸಲಿದೆ. ಪ್ರಸ್ತಾವನೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಮನವಿ ಮಾಡಬಹುದು. ಮಾಲ್, ಚಿತ್ರಮಂದಿರ, ಕಲ್ಯಾಣ ಮಂಟಪ, ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಪ್ರವೇಶ ನೀಡುವಂತೆ ಬಿಬಿಎಂಪಿ ತನ್ನ ಪ್ರಸ್ತಾವನೆಯಲ್ಲಿ ತಿಳಿಸುವ ಸಾಧ್ಯತೆ ಹೆಚ್ಚಿದೆ.

English summary
Coronation of coronavirus in school-colleges in the state is on the rise, Education Minister B Nagesh said. They said they would visit soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X