ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್; ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 26; " ಕೋವಿಡ್ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು"‌ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹೇಳಿದ್ದಾರೆ.

"ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ" ಎಂದರು.

ಕೋವಿಡ್ 19ಕ್ಕೆ ಚಿಕಿತ್ಸೆ ಪ್ಲಾಸ್ಮಾ ಹುಡುಕಾಟ ಇಲ್ಲಿವೆ Helplines ಕೋವಿಡ್ 19ಕ್ಕೆ ಚಿಕಿತ್ಸೆ ಪ್ಲಾಸ್ಮಾ ಹುಡುಕಾಟ ಇಲ್ಲಿವೆ Helplines

"ಕೋವಿಡ್ ರೋಗಿಗಳು ತಮ್ಮ ಇಚ್ಛಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಜನರಲ್ ವಾರ್ಡ್‌ಗೆ ರೂ. 10,000, ಹೆಚ್ ಡಿಯುಗೆ ರೂ.12,000, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದ ಚಿಕಿತ್ಸೆಗೆ ರೂ. 15,000 ಹಾಗೂ ಐಸೊಲೇಷನ್ ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ ರೂ. 25,000 ಸರ್ಕಾರ ನಿಗದಿಪಡಿಸಿರುವ ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳ ಭರಿಸಬೇಕಾಗುತ್ತದೆ" ಎಂದು ತಿಳಿಸಿದರು.

ಬೀದರ್; ಡಿಸಿ ಸ್ಪಂದನೆ, ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆಬೀದರ್; ಡಿಸಿ ಸ್ಪಂದನೆ, ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ

COVID Patient Will Treat Under Arogya Karnataka Scheme

ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ, ಚಿಕಿತ್ಸೆ ನೀಡಲು ವಿಳಂಬ ಮಾಡಿದಲ್ಲಿ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ ಜನರು ದೂರನ್ನು ನೀಡಬಹುದು.

Recommended Video

ಕೊರೋನಾಗೆ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳಿ ! | Oneindia Kannada

ಜನರು ದೂರು ನೀಡಲು ದೂರವಾಣಿ ಸಂಖ್ಯೆ 1800 425 8330 ಹಾಗೂ 1912. ಇ-ಮೇಲ್ ವಿಳಾಸ [email protected] ಗೆ ಮೇಲ್ ಕಳಿಸುವ ಮೂಲಕ ಸಹ ದೂರು ಸಲ್ಲಿಸಬಹುದು.

English summary
As per the rule of Karnataka government COVID positive patient will treat under the Ayushman Bharat Arogya Karnataka scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X