ಕೋವಿಡ್; ಖಾಸಗಿ ಆಸ್ಪತ್ರೆ ಹಾಸಿಗೆ ಬಳಕೆ ನಿಯಮ ಬದಲು

ಬೆಂಗಳೂರು, ನವೆಂಬರ್ 19 : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳ ಹಾಸಿಗೆ ಮೀಸಲಿಡುವ ನಿಯಮವನ್ನು ಸಹ ಪರಿಷ್ಕರಣೆ ಮಾಡಲಾಗಿದೆ.

ಹೊಸದಾಗಿ ಪರಿಷ್ಕರಣೆ ಮಾಡಲಾದ ನಿಯಮಗಳ ಅನ್ವಯ ಸರ್ಕಾರಿ ಆಸ್ಪತ್ರೆಗಳ ಬೆಡ್‌ಗಳು ಶೇ 90ರಷ್ಟು ಭರ್ತಿಯಾಗಿದ್ದರೆ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗುತ್ತದೆ. ಐಸಿಯು ಮತ್ತು ಐಸಿಯು ವೆಂಟಿಲೇಟರ್‌ ಬೆಡ್‌ಗಳನ್ನು ಸಹ ಇದೇ ಮಾದರಿಯಲ್ಲಿ ರೆಫರ್ ಮಾಡಲಾಗುತ್ತದೆ.

ಪ್ರಸ್ತುತ ಖಾಸಗಿ ಆಸ್ಪತ್ರೆಗಳ ಶೇ 20, ವೈದ್ಯಕೀಯ ಕಾಲೇಜುಗಳ ಶೇ 9ರಷ್ಟು ಹಾಸಿಗೆಗಳು ಭರ್ತಿಯಾಗಿವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಹಾಸಿಗೆಗಳಿಗೆ ಬೇಡಿಕೆ ಕಡಿಮೆಯಾಗಿದೆ.

Covid Patients Bed Blocking Protocol Changed

ಬೆಂಗಳೂರು ನಗರದಲ್ಲಿ ಅಕ್ಟೋಬರ್ 15ರ ತನಕ 63,180 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೇವಲ 18,364 ಪ್ರಕರಣಗಳನ್ನು ಮಾತ್ರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಸ ಪ್ರಕರಣಗಳ ಸಂಖ್ಯೆ ಕಡಿಮೆ, ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಜನರು ಬಯಸುತ್ತಿದ್ದು, ಖಾಸಗಿ ಆಸ್ಪತ್ರೆ ಬೆಡ್‌ಗಳ ಬೇಡಿಕೆ ತಗ್ಗಿದೆ.

ನವೆಂಬರ್ 1 ರಿಂದ 15ರ ತನಕ ನಗರದಲ್ಲಿ 19,355 ಪ್ರಕರಣಗಳು ದಾಖಲಾಗಿವೆ. 5,894 ಪ್ರಕರಣಗಳನ್ನು ಮಾತ್ರ ಆಸ್ಪತ್ರೆಗೆಗ ದಾಖಲು ಮಾಡಲಾಗಿದೆ. ನಗರದಲ್ಲಿ 11,593 ಬೆಡ್‌ಗಳು ಖಾಲಿ ಇವೆ.

ಬೆಂಗಳೂರು ನಗರದಲ್ಲಿ ಬುಧವಾರ 933 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 3,59,539ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,703.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+