ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಆಸ್ಪತ್ರೆ ಓಪಿಡಿಗೆ ಬರುವವರಿಗೆ ಶೀತಜ್ವರ, ಉಸಿರಾಟದ ಸಮಸ್ಯೆ ಇದ್ದರೆ ಕೋವಿಡ್ ಪರೀಕ್ಷೆ ಕಡ್ಡಾಯ

|
Google Oneindia Kannada News

ಬೆಂಗಳೂರು, ಡಿ.20: ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ (ಒಪಿಡಿ)ಕ್ಕೆ ಬರುವ ಶೀತಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿದಂತಹ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

ಶೀತಜ್ವರ (ಇನ್‌ಫ್ಲುಯೆನ್ಜಾ ಲೈಕ್ ಇಲ್‌ನೆಸ್ -ಐಎಲ್‌ಐ) ಹಾಗೂ ಉಸಿರಾಟಕ್ಕೆ ಸಂಬಂಧಿಸಿದಂತಹ ಸೋಂಕು ಇರುವವರು (ಸೀವಿಯರ್ ಅಕ್ಯೂಟ್ ರೆಸ್ಪರೇಟರಿ ಇನ್‌ಫೆಕ್ಷನ್ಸ್‌ -ಸಾರಿ) ರೋಗಿಗಳಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಬೇಕು. ಇತರೆ ರೋಗಿಗಳಿಗೂ ಅಗತ್ಯವಿದ್ದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಲು ಸೂಚಿಸಬೇಕು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.

ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ 100ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್(PHANA) ಜೊತೆ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಾತನಾಡಿದರು.

Covid Test is Mandatory For Private Hospital OPD ILI, SARI Patients

'ನಗರದಲ್ಲಿ ಕೋವಿಡ್ ಸೋಂಕು ಹರಡಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ಮೊದಲನೇ ಡೋಸ್ ಪಡೆದು ಎರಡನೇ ಡೋಸ್ ಪಡೆಯದಿದ್ದರೆ ಕೂಡಲೆ ಎಲ್ಲರಿಗೂ ಎರಡನೇ ಡೋಸ್ ಲಸಿಕೆ ನೀಡಬೇಕು. ಜೊತೆಗೆ ಆಸ್ಪತ್ರೆಗೆ ಬರುವ ಎಲ್ಲರಿಗೂ ಎರಡೂ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಾತರಿಪಡಿಸಿಕೊಂಡು ಲಸಿಕೆ ಪಡೆದವರಿಗೆ ಲಸಿಕೆ ನೀಡಬೇಕು' ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ಸೋಂಕು ಚಿಕಿತ್ಸೆಗಾಗಿ ಮೀಸಲಿಟ್ಟಿರುವ ಹಾಸಿಗೆಗಳ (ರಿಯಲ್ ಟೈಮ್ ಬೆಡ್ ಅವೈಲಬಲಿಟಿ) ಬಗ್ಗೆ PHANA ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕು. ಇದಲ್ಲದೆ ಆಕ್ಸಿಜನ್ ಸಮಸ್ಯೆಯಾಗದಂತೆ ಮುಂಚಿತವಾಗಿ ಎಲ್ಲಾ ರೀತಿಯ ಪೂರ್ವತಯಾರಿಗಳನ್ನು ಮಾಡಿಕೊಂಡಿರಬೇಕು ಎಂದು ಸೂಚನೆ ನೀಡಿದರು.

Covid Test is Mandatory For Private Hospital OPD ILI, SARI Patients

ಸದ್ಯ ನಗರದಲ್ಲಿ ಕೋವಿಡ್ ಪ್ರಕರಣಗಳು ಸುಸ್ಥಿತಿಯಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಹಿಂದಿನ ಅದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಹಾಸಿಗೆ ಮೀಸಲಿಡಲು ಸಿದ್ದರಾಗಿರಬೇಕು. ಅಲ್ಲದೆ ಮಕ್ಕಳ ಚಿಕಿತ್ಸೆಗಾಗಿಯೂ ಪ್ರತ್ಯೇಕ ಹಾಸಿಗೆ ವ್ಯಸಸ್ಥೆ ಮಾಡಿಕೊಂಡಿರಬೇಕು ಎಂದು ಡಾ. ತ್ರಿಲೋಕ್ ಚಂದ್ರ ತಿಳಿಸಿದರು.

ಬಿಬಿಎಂಪಿಯಿಂದ ವಿಶೇಷ ಆಸ್ಪತ್ರೆ ತಪಾಸಣಾ ತಂಡಗಳು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುತ್ತಿದ್ದಾರೆ.

ಸಭೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು, ವಾರ್ ರೂಂ ವೈದ್ಯರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Recommended Video

ವಿಶ್ವದ Top 10 ನಾಯಕರಲ್ಲಿ Modiಗೆ ಎಷ್ಟನೇ ಸ್ಥಾನ? | Oneindia Kannada

English summary
Influenza-like Illness and Severe Acute Respiratory Infections Patients must undergo compulsory covid test. BBMP special commissioner (health) Dr Tirloka Chandra said that other patients should also be examined for mandatory testing if needed. Trilok Chandra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X