ಬೆಂಗಳೂರಲ್ಲಿ ಕೋವಿಡ್ ಲಸಿಕೆ ನೀಡಿಕೆ ಇಳಿಮುಖಗೊಂಡಿದ್ದೇಕೆ?

ಬೆಂಗಳೂರು, ಸೆಪ್ಟೆಂಬರ್ 15; ಪ್ರತಿದಿನ ಕರ್ನಾಟಕದಲ್ಲಿ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡುವ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಂಬರ್ 1 ಸ್ಥಾನದಲ್ಲಿತ್ತು. ಆದರೆ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್ ಲಸಿಕೆ ನೀಡುವ ಪ್ರಮಾಣ ಇಳಿಕೆಯಾಗಿದೆ.

ಕಳೆದ ಶುಕ್ರವಾರದಿಂದ ಸೋಮವಾರದ ತನಕ ರಾಜ್ಯದಲ್ಲಿ ಪ್ರತಿದಿನ 2.07 ಲಕ್ಷ ಡೋಸ್ ಲಸಿಕೆಯನ್ನು ಮಾತ್ರ ನೀಡಲಾಗಿದೆ. ಪ್ರತಿದಿನ ಕನಿಷ್ಠ 5.43 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿತ್ತು. ಆಗಸ್ಟ್ 21ರಿಂದ ಸೆಪ್ಟೆಂಬರ್ 9ರ ತನಕ ಹೋಲಿಕೆ ಮಾಡಿದರೆ ಲಸಿಕೆ ನೀಡುವ ಪ್ರಮಾಣ ಇಳಿಮುಖಗೊಂಡಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಲಸಿಕೆ ನೀಡುವ ಪ್ರಮಾಣ ಇಳಿಮುಖವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ, "ಸಾಲು-ಸಾಲು ರಜೆ ಮತ್ತು ಗೌರಿ ಗಣೇಶ ಹಬ್ಬದ ಕಾರಣದಿಂದಾಗಿ ಲಸಿಕೆ ನೀಡುವ ಪ್ರಮಾಣ ಇಳಿಕೆಯಾಗಿದೆ. ಸೆಪ್ಟೆಂಬರ್ 13ರ ಸೋಮವಾರದಿಂದ ಪುನಃ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಲಾಗಿದೆ" ಎಂದು ಹೇಳಿದ್ದಾರೆ.

Covid Vaccination Bengaluru Witnessed A dip In Few Days

ಕೇಂದ್ರದಿಂದ ಪೂರೈಕೆಯಾಗುವ ಲಸಿಕೆ ಪ್ರಮಾಣದಲ್ಲಿ ಇಳಿಮುಖವಾಗಿದೆ. ಆದ್ದರಿಂದ ಲಸಿಕೆ ನೀಡುವ ಸಂಖ್ಯೆಯೂ ಕಡಿಮೆಯಾಗಿದೆ. ಎಂಬ ಸುದ್ದಿಗಳಿತ್ತು. ಆದರೆ ಆರೋಗ್ಯ ಸಚಿವರು ಇದನ್ನು ತಳ್ಳಿಹಾಕಿದ್ದಾರೆ. ಲಸಿಕೆ ಪೂರೈಕೆ ಸಾಮಾನ್ಯವಾಗಿಯೇ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 5 ಮತ್ತು 6ರಂದು 70 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ. ಅಂದಿನಿಂದಲೇ ಲಸಿಕೆ ನೀಡುವ ಪ್ರಮಾಣದಲ್ಲಿ ಇಳಿಕೆಯಾಗಿದೆ. ಸೆಪ್ಟೆಂಬರ್ 9ರಂದು 28,323 ಡೋಸ್ ಲಸಿಕೆ ಮಾತ್ರ ಪೂರೈಕೆಯಾಗಿದೆ.

ಸೆಪ್ಟೆಂಬರ್ 10ರ ಶುಕ್ರವಾರ 15,492 ಡೋಸ್, ಶನಿವಾರ 45,785 ಡೋಸ್ ಮಾತ್ರ ಪೂರೈಕೆಯಾಗಿದೆ. ಹಬ್ಬಗಳು ಮುಗಿದ ಬಳಿಕ ಮತ್ತೆ ಕೋವಿಡ್ ಲಸಿಕೆ ನೀಡುವ ಸಂಖ್ಯೆ ಹೆಚ್ಚಳವಾಗಿದೆ. ಸೆಪ್ಟೆಂಬರ್ 14ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ 53,476 ಡೋಸ್ ಲಸಿಕೆ ನೀಡಲಾಗಿದೆ.

ಮಂಗಳವಾರ ರಾಜ್ಯದಲ್ಲಿ ಒಟ್ಟು 3,00,227 ಡೋಸ್ ಲಸಿಕೆ ನೀಡಲಾಗಿದೆ. ಇದರಲ್ಲಿ ಬೆಳಗಾವಿಯಲ್ಲಿ 24,077 ಮತ್ತು ತುಮಕೂರು ಜಿಲ್ಲೆಯಲ್ಲಿ 17,944 ಡೋಸ್ ನೀಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 4,82,05,237 ಡೋಸ್ ಲಸಿಕೆ ನೀಡಲಾಗಿದೆ.

ಬೃಹತ್ ಲಸಿಕಾ ಮೇಳ; ಕರ್ನಾಟಕ ಸರ್ಕಾರ ಸೆಪ್ಟೆಂಬರ್ 17ರಂದು ಬೃಹತ್ ಲಸಿಕಾ ಮೇಳವನ್ನು ಆಯೋಜನೆ ಮಾಡಿದೆ. ಈ ಅಭಿಯಾನದ ಅಂಗವಾಗಿ ರಾಜ್ಯದಲ್ಲಿ 30 ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈಗಾಗಲೇ ದೇಶದಲ್ಲಿ ಅತಿ ಹೆಚ್ಚು ಲಸಿಕೆ ನೀಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.

ಆಗಸ್ಟ್ ತಿಂಗಳಿನಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂದರೆ 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ.

ಜಿಲ್ಲೆಗಳಲ್ಲಿ ಲಸಿಕೆ ನೀಡಲು ವಿಶೇಷ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಸರಾಸರಿ ಶೇ 71ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಸಹಯೋಗ ಪಡೆದು ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 17ರಂದು ನಡೆಯುವ ಬೃಹತ್ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ಪ್ರತಿದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+