ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಲಸಿಕೆ ಲಭ್ಯತೆ ಆಧಾರದ ಮೇಲೆ ಶಿಬಿರ ನಡೆಸಲು ನಿರ್ಧಾರ: ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಜುಲೈ 16: ಕೊರೊನಾ ಲಸಿಕೆ ಲಭ್ಯತೆ ಆಧಾರದ ಮೇಲೆ ಶಿಬಿರ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ವಾರ್ಡ್ ಮಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇನ್ನು ಆಯ್ದ ಗುಂಪುಗಳಿಗೆ 18 ವರ್ಷ ಮೇಲ್ಪಟ್ಟವರಿಗೆ ತಾತ್ಕಾಲಿಕ ಲಸಿಕಾ ಶಿಬಿರ ತೆರೆದು ಲಸಿಕೆ ಹಾಕಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ಲಸಿಕೆ ನೀಡುವ ವ್ಯವಸ್ಥೆ ಮಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಎಂದಿನಂತೆ ಮುಂದುವರೆಯಲಿದ್ದು, ಲಸಿಕೆ ಲಭ್ಯತೆ ಆಧಾರದ ಮೇಲೆ ವಿಶೇಷ ಲಸಿಕಾ ಶಿಬಿರಗಳ ನಡೆಸಲಾಗುತ್ತದೆ ಎಂದರು.

Covid Vaccination Camps Will Be Held Based On Supplies Says BBMP

198 ವಾರ್ಡ್ ಗಳಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಲಸಿಕೆ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ವಿಶೇಷ ಲಸಿಕಾ ಶಿಬಿರಗಳನ್ನು ಲಸಿಕೆ ಲಭ್ಯತೆ ಆಧಾರದಲ್ಲಿ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1977 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಗುರುವಾರ ಸೋಂಕಿತರ ಸಂಖ್ಯೆ 462 ಆಗಿದೆ.

ಒಂದು ದಿನದ ಅವಧಿಯಲ್ಲಿ 48 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಒಟ್ಟಾರೆ ಸಂಖ್ಯೆ 36037 ಆಗಿದೆ. 24 ಗಂಟೆಗಳಲ್ಲಿ 3188 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Recommended Video

Sonia Gandhi ಅವರ ಮುಂದಿನ ನಡೆ , ಚುನಾವಣೆಯ ದಿಕ್ಕನ್ನೇ ಬದಲಿಸಿಲಿದೆ | Oneindia Kannada

ಗುರುವಾರದ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 2878564ಕ್ಕೆ ಏರಿಕೆಯಾಗಿದೆ. ಈವರೆಗೂ 2810121 ಮಂದಿ ಗುಣಮುಖರಾಗಿದ್ದು, ಸದ್ಯ 32,383 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Vaccination at primary health centres (PHCs) will continue as usual, but camps will be organised depending on the supply and demand of doses, BBMP Chief Commissioner Gaurav Gupta said on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X