ಬೆಂಗಳೂರು; ಅಪಾರ್ಟ್‌ಮೆಂಟ್‌ನಲ್ಲೇ ಕೋವಿಡ್ ಲಸಿಕೆ ಲಭ್ಯ

ಬೆಂಗಳೂರು, ಏಪ್ರಿಲ್ 8; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ. 3,300 ಅಪಾರ್ಟ್‌ಮೆಂಟ್‌ಗಳನ್ನು ಗುರುತಿಸಲಾಗಿದೆ.

ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಈ ಕುರಿತು ಮಾಹಿತಿ ನೀಡಿದ್ದಾರೆ. "550ಕ್ಕಿಂತ ಹೆಚ್ಚು ಜನರು ಇರುವ ಅಪಾರ್ಟ್‌ಮೆಂಟ್‌ಗಳನ್ನು ವಾರ್ಡ್‌ ವಾರು ಗುರುತಿಸಲಾಗಿದೆ" ಎಂದರು.

"ಖಾಸಗಿ ಆಸ್ಪತ್ರೆಗಳಿಗೆ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್ ಲಸಿಕೆ ಹಾಕುವ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಬಿಎಂಪಿ ಸೂಚನೆ ನೀಡಲಿದೆ. 3,300 ಅಪಾರ್ಟ್‌ಮೆಂಟ್‌ಗಳನ್ನು ಇದುವರೆಗೂ ಗುರುತಿಸಲಾಗಿದೆ" ಎಂದು ಹೇಳಿದರು.

COVID Vaccination In Apartment Complex Soon

ಕೊಳಗೇರಿ ಪ್ರದೇಶಗಳನ್ನು ಸಹ ಕೋವಿಡ್ ಲಸಿಕೆ ಹಾಕಲು ಗುರುತು ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಲಸಿಕೆ ಹಾಕಲು ವ್ಯವಸ್ಥೆ ಮಾಡಲಿದ್ದಾರೆ. ನಗರದಲ್ಲಿ ಪ್ರತಿದಿನ 75,000 ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಇದನ್ನು 1,00,000ಕ್ಕೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ.

ಗುರುವಾರದ ಮಾಹಿತಿಯಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ 4422 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 4,64,438. ಸಕ್ರಿಯ ಪ್ರಕರಣಗಳ ಸಂಖ್ಯೆ 38,946.

ಬೆಂಗಳೂರು ನಗರದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಏಪ್ರಿಲ್ 20ರ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+