ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಅಪಾರ್ಟ್‌ಮೆಂಟ್‌ನಲ್ಲೇ ಕೋವಿಡ್ ಲಸಿಕೆ ಲಭ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 8; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ. 3,300 ಅಪಾರ್ಟ್‌ಮೆಂಟ್‌ಗಳನ್ನು ಗುರುತಿಸಲಾಗಿದೆ.

ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಈ ಕುರಿತು ಮಾಹಿತಿ ನೀಡಿದ್ದಾರೆ. "550ಕ್ಕಿಂತ ಹೆಚ್ಚು ಜನರು ಇರುವ ಅಪಾರ್ಟ್‌ಮೆಂಟ್‌ಗಳನ್ನು ವಾರ್ಡ್‌ ವಾರು ಗುರುತಿಸಲಾಗಿದೆ" ಎಂದರು.

ಏಪ್ರಿಲ್ 11 ರಿಂದ ಕೆಲಸದ ಸ್ಥಳದಲ್ಲೇ ಕೊರೊನಾ ಲಸಿಕೆ ವಿತರಣೆ: ಸುಧಾಕರ್ ಏಪ್ರಿಲ್ 11 ರಿಂದ ಕೆಲಸದ ಸ್ಥಳದಲ್ಲೇ ಕೊರೊನಾ ಲಸಿಕೆ ವಿತರಣೆ: ಸುಧಾಕರ್

"ಖಾಸಗಿ ಆಸ್ಪತ್ರೆಗಳಿಗೆ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್ ಲಸಿಕೆ ಹಾಕುವ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಬಿಎಂಪಿ ಸೂಚನೆ ನೀಡಲಿದೆ. 3,300 ಅಪಾರ್ಟ್‌ಮೆಂಟ್‌ಗಳನ್ನು ಇದುವರೆಗೂ ಗುರುತಿಸಲಾಗಿದೆ" ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾ ಲಸಿಕೆ ವ್ಯರ್ಥ; ಜಾವ್ಡೇಕರ್ ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾ ಲಸಿಕೆ ವ್ಯರ್ಥ; ಜಾವ್ಡೇಕರ್

COVID Vaccination In Apartment Complex Soon

ಕೊಳಗೇರಿ ಪ್ರದೇಶಗಳನ್ನು ಸಹ ಕೋವಿಡ್ ಲಸಿಕೆ ಹಾಕಲು ಗುರುತು ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಲಸಿಕೆ ಹಾಕಲು ವ್ಯವಸ್ಥೆ ಮಾಡಲಿದ್ದಾರೆ. ನಗರದಲ್ಲಿ ಪ್ರತಿದಿನ 75,000 ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಇದನ್ನು 1,00,000ಕ್ಕೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ.

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಡೋಸ್ ಪೂರೈಕೆಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಡೋಸ್ ಪೂರೈಕೆ

ಗುರುವಾರದ ಮಾಹಿತಿಯಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ 4422 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 4,64,438. ಸಕ್ರಿಯ ಪ್ರಕರಣಗಳ ಸಂಖ್ಯೆ 38,946.

ಬೆಂಗಳೂರು ನಗರದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಏಪ್ರಿಲ್ 20ರ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

Recommended Video

#Covid19Update : ದೇಶದಲ್ಲಿ 24 ಗಂಟೆಗಳಲ್ಲಿ 1,31,968 ಜನರಿಗೆ ಕೊರೊನಾ ಪಾಸಿಟಿವ್ | Oneindia Kannada

English summary
In Bengaluru 3,300 apartment complexes identified private hospitals will create sub-centres with facilities for vaccination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X