ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2021ರ ಆರಂಭದಲ್ಲಿ ಕೊರೊನಾ ಲಸಿಕೆ ನಿರೀಕ್ಷೆ: ಕೆ ಸುಧಾಕರ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 27: ಕೊರೊನಾ ಲಸಿಕೆಯು 2021ರ ಆರಂಭದಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಇಂದು ಲಸಿಕೆ ಅಭಿವೃದ್ಧಿಯ ಪ್ರಗತಿ, ಅದರ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಿದರು. 2021ರ ಆರಂಭದ ವೇಳೆಗೆ ಲಸಿಕೆ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಗೋ ಕೊರೊನಾ ಗೋ ಅಂದ್ರೂ ಸಚಿವ ಅಠಾವಳೆಯವರನ್ನು ಬಿಡಲಿಲ್ಲ ಸೋಂಕುಗೋ ಕೊರೊನಾ ಗೋ ಅಂದ್ರೂ ಸಚಿವ ಅಠಾವಳೆಯವರನ್ನು ಬಿಡಲಿಲ್ಲ ಸೋಂಕು

ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು

ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಇತರೆ ಸಂಸ್ಥೆಗಳಾದ ಸೀರಮ್ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಸಂಸ್ಥೆಗಳ ಜೊತೆಗೂ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು.

ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಲಸಿಕೆ ಎಂದು ಲಭ್ಯವಾಗುತ್ತದೆ ಎಂಬ ಪ್ರಶ್ನೆಗೆ ನಿಖರ ಉತ್ತರ ಯಾರ ಬಳಿಯೂ ಸದ್ಯಕ್ಕಿಲ್ ರೋಟಾ ವೈರಸ್ ಗೆ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯಿತು.

ಮಂಪ್ಸ್ ವೈರಸ್ ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆ. ಈಗ ಕೊರೊನಾ ವೈರಸ್ ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದೇವೆ.

ಕೊರೊನಾ ವೈರಸ್ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ. ವಿಜ್ಞಾನಿಗಳ ಪ್ರಯತ್ನ ಆದಷ್ಟು ಬೇಗ ಫಲ ನೀಡಲಿ ಎಂದು ಆಶಿಸುತ್ತಾ ಲಸಿಕೆ ಸಿಗುವವರೆಗೂ ಮಾಸ್ಕ್ ಧರಿಸಿವುದು, ಪದೇ ಪದೇ ಕೈ ತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸೋಣ ಎಂದು ಹೇಳಿದರು.

ಆಂಟಿಬಾಡಿ ಉತ್ಪಾದನೆ

ಆಂಟಿಬಾಡಿ ಉತ್ಪಾದನೆ

ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆ್ಯಂಟಿಬಾಡಿ ಉತ್ಪಾದನೆ ಆಗಿದೆ. 1 ನೇ ಹಂತದಲ್ಲಿ ಕೊರೊನಾ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3 ನೇ ಹಂತಗಳಲ್ಲಿ ಕೊರೊನಾ ಸೋಂಕು ಬಂದಿರುವವರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.

ಹೊಸ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ

ಹೊಸ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ

ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕೊರೊನಾ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡುತ್ತಿದ್ದಾರೆ. ಯಾವುದೇ ಅಂಕಿ- ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಕರ್ನಾಟಕ ಸರ್ಕಾರ ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಗುಣಮಖರಾದವರ ಅಂಕಿ ಅಂಶ

ಗುಣಮಖರಾದವರ ಅಂಕಿ ಅಂಶ

ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕೊರೊನಾ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಟ್ರಾಜನಿಕಾ ವ್ಯವಸ್ಥಾಪಕ ನಿರ್ದೇಶಕ ಗಗನ್ ದೀಪ್ ಸಿಂಗ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸಭೆಯಲ್ಲಿದ್ದರು.

ಸಚಿವರು ಹೇಳಿದ ಇತರೆ ಅಂಶಗಳು

ಸಚಿವರು ಹೇಳಿದ ಇತರೆ ಅಂಶಗಳು

-ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಆದ್ದರಿಂದ ಲಸಿಕೆಯ ದರದ ಬಗ್ಗೆ ಚರ್ಚಿಸಿಲ್ಲ. ಲಾಭಕ್ಕಾಗಿ ಲಸಿಕೆ ಮಾಡುತ್ತಿಲ್ಲ ಎಂದು ಆಸ್ಟ್ರಾಜನಿಕಾ ಕಂಪನಿಯವರು ಹೇಳಿದ್ದಾರೆ.

-ಕೋವಿಡ್ ಅಂಕಿ ಅಂಶದಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯವರು ಕೂಡ ನಮ್ಮ ಸರ್ಕಾರ ನೀಡುವ ಮಾಹಿತಿ ಪಾರದರ್ಶಕತೆಯಿಂದ ಕೂಡಿದೆ ಎಂದು ಶ್ಲಾಘಿಸಿದೆ.

-ನವೆಂಬರ್, ಡಿಸೆಂಬರ್, ಜನವರಿಯ ಚಳಿಗಾಲದ ಅವಧಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ.

Recommended Video

Surya Kumar Yadav ರನ್ನು Australia ತಂಡಕ್ಕೆ ಈಗಲೂ ಆಯ್ಕೆ ಮಾಡಿಲ್ಲ | Oneindia Kannada

English summary
Karnataka health minister Dr K Sudhakar on Tuesday expressed confidence that that a vaccine for COVID-19 would be available early in 2021 and said the government would ensure that it reaches every nook and corner of the state after its launch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X