ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಮಣಿಯಲ್ಲಿ ಮಾಲಿನ್ಯ ತಪಾಸಣಾ ವ್ಯವಸ್ಥೆ ಇಲ್ಲದಿದ್ದರೆ ಕಾರ್ಖಾನೆ ಬಂದ್

|
Google Oneindia Kannada News

ಬೆಂಗಳೂರು, ಮಾರ್ಚ್ 07: ಅಪಾಯಕಾರಿ ರಾಸಾಯನಿಕಯುಕ್ತ ಹೊಗೆ ಉಗುಳುವ ಕಾರ್ಖಾನೆಗಳ ಚಿಮಣಿಗಳಲ್ಲಿ ಮಾಲಿನ್ಯ ಪ್ರಮಾಣ ತಪಾಸಣೆ ಮಾಡುವ ವ್ಯವಸ್ಥೆ ಅಳವಡಿಸಿಕೊಳ್ಳದಿದ್ದರೆ ಅಂಥ ಕಾರ್ಖಾನೆಗಳನ್ನು ಮುಚ್ಚುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಸಂಬಂಧ ನಗರದಲ್ಲಿರುವ ಕಾರ್ಖಾನೆಗಳ ಚಿಮಣಿ ಪರಿಶೀಲನೆ ನಡೆಸಿ ಮಾರ್ಚ್ 21ರೊಳಗೆ ವರದಿ ನೀಡುವಂತೆಯೂ ಸೂಚಿಸಿದೆ. ಇದರ ಪರಿಣಾಮ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಾರ್ಖಾನೆಗಳ ಚಿಮಣಿ ತಪಾಸಣೆ ಆರಂಭಿಸಿದ್ದಾರೆ. ನವದೆಹಲಿಯಲ್ಲಿ ವಾಯುಮಾಲಿನ್ಯ ಮಿತಿ ಮೀರಿದ ಬಳಿಕ ನಗರಗಳಲ್ಲಿ ಮಾಲಿನ್ಯ ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಕೈಗೊಂಡಿದೆ.

CPCB asks report on factories pollution in Bengaluru

ಇತ್ತೀಚೆಗೆ ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಪರಿಶೀಲನೆ ನಡೆಸಿದಾಗ ಕಾರ್ಖಾನೆಗಳ ಚಿಮಣಿಗಳಿಂದ ಹೊರಹೊಮ್ಮುವ ಹೊಗೆಯನ್ನು ಪರಿಶೀಲಿಸುವ ವಿಚಾರದಲ್ಲಿ ರಾಜ್ಯ ಮಂಡಳಿಗಳು ಅಸಡ್ಡೆ ತೋರಿರುವುದು ಬೆಳಕಿಗೆ ಬಂದಿದೆ. ಕರ್ನಾಟಕದಲ್ಲೂ ಸರಿಯಾಗಿ ಪರಿಶೀಲನೆ ನಡೆಸದಿರುವುದರಿಂದ ಬೆಂಗಳೂರಿನಲ್ಲಿ ಚಿಮಣಿಗಳಿಂದ ಆಕಾಶಕ್ಕೆ ಹೊಗೆ ಉಗುಳುವ ಕಾರ್ಖಾನೆಗಳು ಹೆಚ್ಚಿನ ಸಂಖ್ಯೆಯಲ್ಲಿದೆ. ನಗರದ ಮಾಲಿನ್ಯಕ್ಕೆ ಕಡಿವಾಣ ಹಾಕಲು ಇಲ್ಲಿಯೂ ಪರಿಶೀಲಿಸುವಂತೆ ಸೂಚಿಸಲಾಗಿದೆ.

English summary
Central pollution control board has asked report on factories pollution in Bengaluru from state pollution control boars within March 21. The state board has issued notice to all factories in the city about chimneys.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X