ಸಾನಿಟೈಸರ್ ಮೈಮೇಲೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ!

ಬೆಂಗಳೂರು, ಮೇ. 11: ಗಂಡನ ಕಿರುಕುಳ ತಾಳಲಾರದೇ ಸಾನಿಟೈಸರ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬಳು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್‌.ಟಿ. ನಗರದ ನಿವಾಸಿ ಶಾಜಿಯಾ ಭಾನು ಆತ್ಮಹತ್ಯೆ ಮಾಡಿಕೊಂಡವರು. ಗಂಡ ಇಮ್ರಾನ್ ಖಾನ್ ವಿರುದ್ಧ ಶಾಜಿಯಾ ಪೋಷಕರು ಆರ್.ಟಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಂಡ ಬೇರೆ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ವಿಚಾರ ಮುಂದಿಟ್ಟುಕೊಂಡು ಗಂಡ ಇಮ್ರಾನ್ ಖಾನ್ ಪತ್ನಿಗೆ ಕಿರುಕುಳ ನೀಡುತ್ತಿದ್ದ.

ಇದರಿಂದ ಬೇಸತ್ತ ಶಾಜಿಯಾ ಬಾನು ಮೈಮೇಲೆ ಸಾನಿಟೈಸರ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದು, ಮೃತಳ ಪೋಷಕರು ಆರ್‌.ಟಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ ಇಮ್ರಾನ್ ಖಾನ್ ಶಾಜಿಯಾ ಭಾನು ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಡ್ರಗ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ ಸಿಸಿಬಿ: ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಡುತ್ತಿದ್ದ ಇಬ್ಬರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಣವ್ ಮೋಹನನ್ ಮತ್ತು ಜೋವಿನ್ ಜಾನ್ಸನ್ ಬಂಧಿತ ಆರೋಪಿಗಳು. ಇಬ್ಬರಿಂದ 20 ಲಕ್ಷ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ.

Crime update: A woman has committed suicide, drugs peddler held

ಕೇರಳ ಮೂಲದ ಇಬ್ಬರು ಆರೋಪಿಗಳು ಮಾರತಹಳ್ಳಿಯಲ್ಲಿ ಪರಿಚಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು ಹತ್ತು ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿದ್ದು ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime update: A woman has committed suicide, drugs peddler held

Recommended Video

      Pollard ಹೊಡೆತ ತಿಂದ ಅಂಪೈರ್ ಸುಸ್ತ್,ರೋಹಿತ್ ಶರ್ಮಾ‌ ಶಾಕ್!! | Oneindia Kannada

      ಹೊರ ದೇಶಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಕ್ರಿಸ್ಟಲ್ ತರಿಸಿಕೊಂಡು ದುಬಾರಿ ಬೆಲೆಗೆ ಮರಾಟ ಮಾಡುತ್ತಿದ್ದು, ಇವರಿಗೆ ಮಾದಕ ವಸ್ತು ಪೂರೈಕೆ ಮಾಡಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+